ಕೇರಳ ವಿಧಾನಸಭೆ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್!

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ನೂತನವಾಗಿ ಶಾಸಕರಾಗಿರುವವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಶಾಸಕ ಎಕೆಎಂ ಅಶ್ರಫ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕಾಸರಗೋಡು ಜಿಲ್ಲೆಯು ಕೇರಳ ರಾಜ್ಯದಲ್ಲಿದ್ದರೂ ಅಲ್ಲಿನ ಬಹುಪಾಲು ಜನರು ಕನ್ನಡಿಗರಾಗಿದ್ದಾರೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿರುವ ಕಾಸರಗೋಡಿನಲ್ಲಿ ಕನ್ನಡ ಭಾಷೆಯ ಪ್ರಭಾವ ಹೆಚ್ಚಾಗಿದೆ. ಅಂತೆಯೇ ಕಾಸರಗೋಡು ಜಿಲ್ಲೆಯಲ್ಲಿರುವ ಮಂಜೇಶ್ವರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕನ್ನಡಿಗರೇ ಇದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ಪ್ರತಿನಿಧಿಸುವ ಅಶ್ರಫ್ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ಹೇಳಲಾಗಿದೆ.

ಅಶ್ರಫ್‌ ಮಾತ್ರವಲ್ಲದೆ, ಈ ಹಿಂದೆಯೂ ಮಂಜೇಶ್ವರದಿಂದ ಶಾಸಕರಾಗಿದ್ದ ಹಲವು ಶಾಸಕರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಕೇರಳ ವಿಧಾನಸಭೆಯಲ್ಲಿ ಎ ಕೆ ಎಂ ಅಶ್ರಫ್ ಅವರು ಇಂದು ಅಚ್ಚ ಕನ್ನಡದಲ್ಲಿ ಅಲ್ಲಾಹು ಹೆಸರಿನಲ್ಲಿ ಪ್ರತಿಜ್ಞೆಗೈದು ಗಮನ ಸೆಳೆದಿದ್ದಾರೆ. ಅಶ್ರಫ್ ಐಯುಎಂಎಲ್ ನಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆ.

ಇದನ್ನೂ ಓದಿ: ಕುಸ್ತಿ ಚಾಂಪಿಯನ್‌ ಕೊಲೆ ಪ್ರಕರಣ: ಆರೋಪಿ ಸುಶೀಲ್ ಬಂಧನ ಮತ್ತು ಒಎಸ್ಡಿ ಹುದ್ದೆಯಿಂದ ಅಮಾನತು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights