ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ 05 ವರ್ಷ ಜೈಲು; 01 ಲಕ್ಷ ದಂಡ!
ಕೊರೊನಾ ವಿರುದ್ಧದ ಹೋರಾಟದಲ್ಲಿ ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದರೆ 05 ವರ್ಷ ಜೈಲು ಮತ್ತು 01 ಲಕ್ಷ ರೂ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಯ ಮೇಲೆ ಸೋಕಿತರ ಕುಟುಂಬವು ಹಲ್ಲೆ ಮಾಡಿದೆ. ಇದು ವಿಷಾದನೀಯ ಕೃತ್ಯ. ಇಂತಹ ಘಟನೆಗಳು ಮತ್ತೆ ಎಲ್ಲಿಯೂ ನಡೆಯಬಾದರು. ಆ ಕಾರಣಕ್ಕಾಗಿಯೇ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸುವುದನ್ನು ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತಂದಿದೆ ಎಂದು ಅವರು ತಿಳಿಸಿದ್ದಾರೆ.
ವೈದ್ಯರು, ದಾದಿಯರೇ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರುಗಳು ತಪ್ಪು ಮಾಡಿದ್ದರೆ ದೂರು ಕೊಡಿ, ನಾವು ಕ್ರಮ ಕೈಗೊಳ್ಳುತ್ತೇವೆ. ಅದನ್ನು ಬಿಟ್ಟು ಅವರ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರರಿಗೆ 5 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ ವಿಧಿಸಲಾಗುವುದು ಎಂದು ಸುಧಾಕರ್ ಎಚ್ಚರಿಸಿದ್ದಾರೆ.
ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯೆ ಮೇಲೆ ಹಲ್ಲೆ ನಡೆಸಿದ ಘಟನೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾದಿಂದ ವ್ಯಕ್ತಿ ಸಾವನ್ನಪ್ಪಿದ ಕಾರಣಕ್ಕೆ ರೊಚ್ಚಿಗೆದ್ದ ಸಂಬಂಧಿಕರು ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ವೈದ್ಯರು ಆಸ್ಪತ್ರೆ ಸಿಬ್ಬಂದಿಗಳು ಹಗಲಿರುಳು ರೋಗಿಗಳ ಸೇವೆ ಮಾಡುತ್ತಿದ್ದಾರೆ. ತಮ್ಮ ಜೀವನವನ್ನೇ ಪಣಕಿಟ್ಟು ಸೇವೆ ಸಲ್ಲಿಸುವ ವೈದ್ಯರಿಗೆ ರಕ್ಷಣೆ ಇಲ್ಲವಾ ಎಂದು ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇದನ್ನೂ ಓದಿ: ಕೊರೊನಾ ಆಕ್ರಮಣ: SSLC ಪರೀಕ್ಷೆ ಮುಂದೂಡಿಕೆ; ಸಾಧ್ಯವಾದರೆ ಜುಲೈ ತಿಂಗಳಿನಲ್ಲಿ ನಡೆಯಲಿವೆ ಪರೀಕ್ಷೆಗಳು!

