ಕೊರೊನಾ ನಿರ್ವಹಣೆ ವೈಫಲ್ಯ: ಮೋದಿ ವರ್ಚಸ್ಸು ಉಳಿಸಲು ಕೇಂದ್ರ ಸಚಿವ ಹರ್ಷವಧನ್‌, ಸಿಎಂ ಬಿಎಸ್‌ವೈ ತಲೆದಂಡ?

ಕಳೆದ ಒಂದು ವರ್ಷದಿಂದ ದೇಶವು ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದ ಬಳಲುತ್ತಿದೆ. ಒಂದು ವರ್ಷ ಕಳೆದರು ಕೊರೊನಾ ವಿರುದ್ದ ಹೋರಾಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇತ್ತೀಚೆಗೆ ಆಕ್ರಮಿಸಿಕೊಂಡಿರುವ ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಮೋದಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಅವರ ವರ್ಚಸ್ಸನ್ನು ಉಳಿಸಿಕೊಳ್ಳಲು ಬಿಜೆಪಿ ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕನ್ನು ಆಕ್ರಮಣ ಹೆಚ್ಚಾಗಿದ್ದು, ರಾಜ್ಯ ಸರ್ಕಾರಗಳು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರ ಪ್ರದೇಶದಿಂದ ಕೋವಿಡ್‌ನಿಂದ ಮೃತಪಟ್ಟವರ ಶವಗಳು ಗಂಗಾ ನದಿಯ ತಡದಲ್ಲಿ ತೇಲುತ್ತಿವೆ. ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ದಿನ ನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುವ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡ್‌ನಲ್ಲಿ ಕುಂಭಮೇಳ ನಡೆದ ನಂತರ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಅದರೆ, ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಕುಂಭಮೇಳ ನಡೆದ ಹರಿದ್ವಾರದಲ್ಲಿ ಕೊರೊನಾ ಪಾಸಿಟಿವ್‌ ದರ ಭಾರೀ ಇಳಿಕೆ; ಉತ್ತರಾಖಂಡ್ ಸರ್ಕಾರ ಮಾಡಿದ್ದೇನು?

ಈ ಎಲ್ಲಾ ಕಾರಣಗಳಿಂದ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ವರ್ಚಸ್ಸು ಕುಸಿಯುತ್ತಿದೆ. ಇದನ್ನು ತಪ್ಪಿಸಿ, ಮೋದಿಯನ್ನು ಮತ್ತೆ ವೈಭವೀಕರಿಸಲು ಮುಂದಾಗಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪೊಲಿಟಕ್‌ ಸರ್ಜರಿ ನಡೆಸಿ, ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದಕ್ಕಾಗಿ, ಈಗಾಗಲೇ ಮೋದಿ ಹಾಗೂ ಅಮಿತ್ ಷಾ ಅವರು ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ, ಅವರಿಂದ ರಾಜೀನಾಮೆ ಪಡೆದು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ-ಶಾ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಈ ಪೈಕಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು. ಕರ್ನಾಟಕದ ಸಿಎಂ ಬಿಎಸ್‌ವೈ ಅವರನ್ನು ಮುಖ್ಯಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಶುರು ಮಾಡಿದ್ದಾರೆ. ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಕೆಲವರ ತಲೆದಂಡವಾಗಲಿದೆ. ಈ ತಲೆದಂಡವನ್ನೇ ಅಸ್ತ್ರವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಭಕ್ತರ ಗಣ ಮತ್ತೆ ಮೋದಿಯವರನ್ನು ಅಟ್ಟಕ್ಕೇರಿಸಲಿದೆ ಎಂದು ರಾಜಕೀಯ ವಿಮರ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಿಎಂ ಖುರ್ಚಿಗೆ ಸಂಚಕಾರ?; ನಿಜಕ್ಕೂ ಬಿಎಸ್‌ವೈಗೆ ಕೊರೊನಾ ಬಂದಿತ್ತಾ? ಇವೆ ಹಲವು ಅನುಮಾನಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights