ಆಹಾರದ ಆಮಿಷವೊಡ್ಡಿ ಆಂಬುಲೆನ್ಸ್‌ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ!

ಕೊರೊನಾ, ಲಾಕ್‌ಡೌನ್‌ನಿಂದಾಗಿ ಹಲವಾರು ಜನರು ಆಹಾರ ಸೇರಿದಂತೆ ಹಲವಾರು ಅಗತ್ಯ ಸೇವೆಗಳಿಲ್ಲದೆ ಪರದಾಡುತ್ತಿದ್ದಾರೆ. ಇದೇ ಸಂದರ್ಭವನ್ನು ಬಳಸಿಕೊಂಡಿರುವ ಇಬ್ಬರು ಕಾಮುಕರು ಆಹಾರ ನೀಡುವುದಾಗಿ ಆಮಿಷವೊಡ್ಡಿ 22 ವರ್ಷದ ಯುವತಿಯ ಮೇಲೆ ಆಂಬುಲೆನ್ಸ್‌ನಲ್ಲಿ ಅತ್ಯಾಚಾರ ಎಸಗಿರುವ ಅಮಾನವೀಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಲಾಕ್‌ಡೌನ್‌ನಿಂದಾಗಿ ಜನರ ಓಡಾಟವಿಲ್ಲದ್ದರಿಂದಾಗಿ ರಸ್ತೆಗಳು, ಬೀದಿಗಳು ನಿರ್ಜನವಾಗಿವೆ. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಯುವತಿಗೆ ಆಹಾರ ನೀಡುತ್ತೇವೆ ಎಂದು ಆಮಿಷ ತೋರಿಸಿ ಕಾಮುಕರು ಯುವತಿಯನ್ನು ಆಂಬುಲೆನ್ಸ್‌ ಹತ್ತಿಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯು ಪೊಲೀಸರಿಗೆ ದೂರು ನೀಡಿದ್ದು, ಆಂಬುಲೆನ್ಸ್‌ ಚಾಲಕ ಮತ್ತು ಆತನ ಸಹವರ್ತಿಯನ್ನು ಬಂಧಿಲಾಗಿದೆ ಎಂದು ಮೋತಿ ದೂಂಗ್ರಿ ಪೊಲೀಸ್ ಠಾಣೆಯ ಅಧಿಕಾರಿ ಸುರೇಂದ್ರ ಪಂಚೋಲಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ದ ಸಾಮೂಹಿಕ ಅತ್ಯಾಚಾರ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಹಿಳೆಯ ಹೇಳಿಕೆ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Read Also: ರಜೆ ಕೇಳಿದ್ದಕ್ಕೆ ದಲಿತ ಕುಟುಂಬದ ಮೇಲೆ ಹಲ್ಲೆ; ಮಕ್ಕಳ ಎದುರೇ ಗರ್ಭಿಣಿ ಮೇಲೆ ಅತ್ಯಾಚಾರ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights