ಮಹಿಳೆಯ ಮೇಲೆ ಅತ್ಯಾಚಾರ, ಹಲ್ಲೆ : ಬೆಂಗಳೂರಿನಲ್ಲಿ 5 ಬಾಂಗ್ಲಾದೇಶಿಗರ ಬಂಧನ..!
ಮಹಿಳೆಯ ಮೇಲೆ ಅತ್ಯಾಚಾರ, ಹಲ್ಲೆ ನಡೆಸಿದ ಆರೋಪದ ಮೇಲೆ 5 ಬಾಂಗ್ಲಾದೇಶಿಗರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಚಿತ್ರಹಿಂಸೆ ಆರೋಪದಡಿ ಬೆಂಗಳೂರು ಪೊಲೀಸರು ಐವರು ಬಾಂಗ್ಲಾದೇಶಿಗರನ್ನು ಬಂಧಿಸಿದ್ದು ರಾಮಮೂರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಮೇಲಿನ ಲೈಂಗಿಕ ಕಿರುಕುಳ ಮತ್ತು ಚಿತ್ರಹಿಂಸೆಯ ಕೃತ್ಯವನ್ನು ಆರೋಪಿ ಚಿತ್ರೀಕರಿಸಿದ್ದಾರೆ.
ಸಂತ್ರಸ್ತೆ ಮತ್ತು ಐವರು ಆರೋಪಿಗಳೆಲ್ಲರೂ ಬಾಂಗ್ಲಾದೇಶದ ಪ್ರಜೆಗಳು ಎಂದು ಪ್ರಕರಣದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಂತ್ರಸ್ತೆಯನ್ನು ಕಳ್ಳಸಾಗಣೆ ಮೂಲಕ ಭಾರತಕ್ಕೆ ಕರೆತರಲಾಯಿತು ಎಂದು ಪೊಲೀಸರು ಹೇಳುತ್ತಾರೆ.
ಪೊಲೀಸರು ಸಂತ್ರಸ್ತೆಯ ಮೂಲವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಅಪರಾಧದ ದಿನಾಂಕ ಕೂಡ ತಿಳಿದಿಲ್ಲ. ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
“ವಿಡಿಯೋ ಮತ್ತು ಪ್ರಾಥಮಿಕ ತನಿಖೆಯ ವಿಷಯಗಳ ಆಧಾರದ ಮೇಲೆ, ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರ ವಿರುದ್ಧ ಅತ್ಯಾಚಾರ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ. ಸಂತ್ರೆಸ್ತೆಯ ಮೂಲವನ್ನು ಪತ್ತೆಹಚ್ಚಲು ಪೊಲೀಸ್ ತಂಡವನ್ನು ಪಕ್ಕದ ರಾಜ್ಯಕ್ಕೆ ನಿಯೋಜಿಸಲಾಗಿದೆ “ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇಲ್ಲಿಯವರೆಗೆ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, “ಅವರೆಲ್ಲರೂ ಒಂದೇ ಗುಂಪಿನವರಾಗಿದ್ದು ಬಾಂಗ್ಲಾದೇಶದವರು ಎಂದು ನಂಬಲಾಗಿದೆ” ಎಂದು ಅವರು ಹೇಳಿದರು.
ಈ ಪ್ರಕರಣದ ತನಿಖೆಗಾಗಿ ಮೂರು ತನಿಖಾಧಿಕಾರಿಗಳ ನೇತೃತ್ವದ ಮೂರು ತಂಡಗಳನ್ನು ರಚಿಸಲಾಗಿದೆ.