ಯಾಸ್‌ ಚಂಡಮಾರುತ: 08 ಲಕ್ಷ ಜನರ ಜೀವನ ಅಸ್ತವ್ಯಸ್ತ; ಮಕ್ಕಳಿಗೆ ಯಾಶ್‌ ಹೆಸರು ನಾಮಕರಣ!

ಜಾರ್ಖಂಡ್‌ಗೆ ಗುರುವಾರ ಯಾಸ್‌ ಚಂಡಮಾರುತ ಅಪ್ಪಳಿಸಿದ್ದು, ರಾಜಧಾನಿ ರಾಂಚಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಪರಿಣಾಮ ಎಂಟು ಲಕ್ಷ ಜನ ತೊಂದರೆಗೆ ಒಳಗಾಗಿದ್ದಾರೆ. ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ಇದೇ ಮೊದಲು ಜಾರ್ಖಂಡ್‌ನಲ್ಲಿ ಚಂಡಮಾರುತವು ಈ ರೀತಿಯ ಪರಿಣಾಮ ಬೀರಿದೆ. ಗುರುವಾರ ಮತ್ತು ಶುಕ್ರವಾರ ಜಾರ್ಖಂಡ್‌ನಲ್ಲಿ ಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿದೆ. 500 ತಂಡಗಳು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.

ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇದೂವರೆಗೂ 15 ಸಾವಿರ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಖಾರ್‌ಖಾಯ್‌ ಮತ್ತು ಸುವರ್ಣರೇಖಾ ಸೇರಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಾಗಾಗಿ, ಪೂರ್ವ ಸಿಂಘ್‌ಭೂಮ್‌ ಜಿಲ್ಲೆಯಲ್ಲಿ ಜನರ ಸ್ಥಳಾಂತರ ಕಾರ್ಯಾಚರಣೆ ನಡೆಯುತ್ತಿವೆ.

ಯಸ್‌ ಚಂಡಮಾರುತವು ಒಡಿಶಾ ಕರಾವಳಿಯನ್ನು ಅಪ್ಪಳಿಸಿದ ದಿನ ರಾಜ್ಯದಲ್ಲಿ 300ಕ್ಕೂ ಹೆಚ್ಚು ಮಕ್ಕಳು ಜನಿಸಿದ್ದಾರೆ. ಅಂದು ಜನಿಸಿದ ಹಲವು ಮಕ್ಕಳಿಗೆ ಚಂಡಮಾರುತದ ಹೆಸರನ್ನೇ ಇರಿಸಲು ಹಲವು ಕುಟುಂಬಗಳು ಮುಂದಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights