ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಒಂದು ಲಕ್ಷಕ್ಕೆ ಇಳಿಕೆ : 1.73 ಲಕ್ಷ ಹೊಸ ಕೇಸ್!

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.73 ಲಕ್ಷ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಕಳೆದ ಆರು ವಾರಗಳಲ್ಲಿ ಇದು ಅತ್ಯಂತ ಕಡಿಮೆ ಪ್ರಕರಣಗಳ ಸಂಖ್ಯೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಶನಿವಾರ ದೇಶದಲ್ಲಿ 1.73 ಲಕ್ಷ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಈವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 2.77 ಕೋಟಿಗೇರಿಕೆಯಾಗಿದೆ. ಏಪ್ರಿಲ್ 12 ರಂದು ಭಾರತ 1.61 ಲಕ್ಷ ಕೋವಿಡ್ ಪ್ರಕರಣಗಳನ್ನು ದಾಖಲಿಸಿದ್ದು ಕಳೆದ 45 ದಿನಗಳಲ್ಲಿ ಇದು ಅತ್ಯಂತ ಕಡಿಮೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 3,617 ಕೋವಿಡ್ ಪಾಸಿಟಿವ್ ರೋಗಿಗಳು ವೈರಸ್‌ಗೆ ಬಲಿಯಾಗಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 3,22,512 ಕ್ಕೆ ತಲುಪಿದೆ. ಈವರೆಗೆ ಕೋವಿಡ್ ವಿರುದ್ಧ 20,89 ಕೋಟಿ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 2,84,601 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ 22.28 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿವೆ, ಇದು ಕಳೆದ 24 ಗಂಟೆಗಳಲ್ಲಿ 1,14,428 ರಷ್ಟು ಕುಸಿದಿದೆ.

ಕಳೆದ 24 ಗಂಟೆಗಳಲ್ಲಿ ಗರಿಷ್ಠ ಕೋವಿಡ್ ಪ್ರಕರಣಗಳನ್ನು ದಾಖಲಿಸಿದ ಐದು ರಾಜ್ಯಗಳಲ್ಲಿ 31,079 ಪ್ರಕರಣಗಳು ತಮಿಳುನಾಡು, 22,823 ಪ್ರಕರಣಗಳು ಕರ್ನಾಟಕ, 22,318 ಪ್ರಕರಣಗಳು ಕೇರಳ, ಮಹಾರಾಷ್ಟ್ರ 20,740 ಪ್ರಕರಣಗಳು ಮತ್ತು ಆಂಧ್ರಪ್ರದೇಶ 14,429 ಪ್ರಕರಣಗಳನ್ನು ದಾಖಲಿಸಿದೆ.

ಮಹಾರಾಷ್ಟ್ರದಲ್ಲಿ (973) ಗರಿಷ್ಠ ಸಾವುನೋವುಗಳು ವರದಿಯಾಗಿದ್ದು, ತಮಿಳುನಾಡಿನಲ್ಲಿ 486 ದೈನಂದಿನ ಸಾವುಗಳು ಸಂಭವಿಸಿವೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights