ಬಿಜೆಪಿ ವ್ಯಾಕ್ಸಿನ್ ಬ್ಲಾಕಿಂಗ್ ದಂಧೆ ನಡೆಸುತ್ತಿದೆ: ಕಾಂಗ್ರೆಸ್ ಗಂಭೀರ ಆರೋಪ

ಬಿಜೆಪಿಯು ಬೆಡ್ ಬ್ಲಾಕಿಂಗ್ ದಂಧೆ ನಡೆಸಿದ್ದು, ಈಗ ವ್ಯಾಕ್ಸಿನ್ ಬ್ಲಾಕಿಂಗ್ ದಂಧೆ ನಡೆಸುತ್ತಿದೆ ಎಂದು ಶನಿವಾರ ಕಾಂಗ್ರೆಸ್‌ ಪಕ್ಷವು ಗಂಭೀರ ಮಾಡಿದೆ. ಈಗಾಗಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಕೊರೊನಾ ಲಸಿಕೆಗಳು ಸಿಗುತ್ತಿಲ್ಲ ಎಂದು ವರದಿಯಾಗಿದೆ. ಆದರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಹೊರಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಚಿತ್ರದೊಂದಿಗೆ ದುಬಾರಿ ಕೊರೊನಾ ಲಸಿಕೆಗಳ ಬಗ್ಗೆ ಜಾಹಿರಾತುಗಳನ್ನು ಪ್ರದರ್ಶಿಸಲಾಗುತ್ತಿದೆ.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌, “ಬೆಡ್ ಬ್ಲಾಕಿಂಗ್ ದಂಧೆಯ ನಂತರ ಬಿಜೆಪಿಯಿಂದ ಈಗ ವ್ಯಾಕ್ಸಿನ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ರವಿ ಸುಬ್ರಮಣ್ಯ ಉಚಿತವಾಗಿ ನೀಡಬೇಕಿದ್ದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳ ಮೂಲಕ ಮಾರಾಟ ಮಾಡುತ್ತಿದ್ದಾರೆ, ಇದಕ್ಕೆ ಬೆಂಬಲವಾಗಿ ಆರೋಗ್ಯ ಸಚಿವರೂ ಸೇರಿ ಇಡೀ ಸರ್ಕಾರವೇ ಈ ಹಗರಣದಲ್ಲಿದೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ಕೊರೊನಾ ಇಲ್ಲದಿರುತ್ತಿದ್ದರೆ ಇಷ್ಟೊತ್ತಿಗಾಗಲೇ BJP ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು: ಕಾಂಗ್ರೆಸ್‌

ಈಗಾಗಲೆ ಒಂದನೆ ಡೋಸ್ ಪಡೆದಿರುವ ವ್ಯಕ್ತಿಗಳಿಗೆ ಎರಡನೆ ಡೋಸ್‌ ಇಲ್ಲ ನಿಗದಿತ ಸಮಯದಲ್ಲಿ ನೀಡಲಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌‌ ಆರೋಪಿಸಿದ್ದಾರೆ.

ಅವರು, “ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ‌ ಡೋಸ್ ಪಡೆದ ಹಲವರಿಗೆ ಎರಡನೇ ಡೋಸ್ ನಿಗದಿತ ಸಮಯದಲ್ಲಿ ನೀಡಲಾಗಿಲ್ಲ. ನಿಜಕ್ಕೂ ಇದು ಯೋಚಿಸಲೇಬೇಕಾದ ಸಂಗತಿ. ವೈಜ್ಞಾನಿಕ‌ ವಿಷಯವನ್ನು ನಿರ್ಲಕ್ಷ್ಯಿಸಬಾರದೆಂದು ರಾಜ್ಯ ಸರ್ಕಾರಕ್ಕೆ ವಿನಂತಿಸಿಕೊಳ್ಳುತ್ತೇನೆ. ನೆನಪಿರಲಿ, ಜನರ ಜೀವ ಅಪಾಯದಲ್ಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights