ಲಾಕ್‌ಡೌನ್‌ ಸಡಿಲಿಕೆ ಸಾಧ್ಯವೇ ಇಲ್ಲ; ಜೂನ್‌ 07ರ ನಂತರವೂ ಲಾಕ್‌ಡೌನ್‌ ಮುಂದುವರೆಯುತ್ತೆ: ಸುಳಿವುಕೊಟ್ಟ ಗೃಹ ಸಚಿವ

ಕೊರೊನಾ ಸೋಂಕು ಪ್ರಕರಣಗಳ ಪ್ರಮಾಣವು ಶೇ. 10ಕ್ಕಿಂತ ಕಡಿಮೆ ಬರುವವರೆಗೂ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡಲು ಸಾಧ್ಯವೇ ಇಲ್ಲ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ. ಹೀಗಾಗಿ ಜೂನ್‌ 07ರ ನಂತರವೂ ಲಾಕ್‌ಡೌನ್‌ ಮುಂದುವರೆಯುವುದು ಖಚಿತ ಎಂದು ಸ್ಪಷ್ಟವಾಗಿದೆ.

ರಾಜ್ಯದಲ್ಲಿ ಪ್ರಸ್ತುತ ಸೋಂಕಿನ ದರ ಶೇ.10ಕ್ಕಿಂತಲೂ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಪ್ರಕರಣಗಳ ಪ್ರಮಾಣ ಶೇ.10ಕ್ಕಿಂತ ಕಡಿಮೆ ಬರುವವರೆಗೂ ಕಠಿಣ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಗೃಹ ಇಲಾಖೆ ಜೂನ್ 30ರ ತನಕ ಕಠಿಣ ಕ್ರಮಗಳನ್ನು ಮುಂದುವರೆಸಲು ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಕಠಿಣ ಕ್ರಮಗಳನ್ನು ಜೂನ್‌ 20ರವರೆಗೂ ಜಾರಿಗೆ ತರುವ ಬಗ್ಗೆ ಸಭೆ ನಿರ್ಧರಿಸಲಿದೆ. ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜೂನ್ 7ರ ವರೆಗೆ ಇರುವ ಲಾಕ್ ಡೌನ್ ನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಬಾರಿ ಲಾಕ್‌ಡೌನ್‌ನಿಂದಾಗಿ ಭಾರೀ ನಷ್ಟ ಆಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ವ್ಯಾಕ್ಸಿನ್ ಬ್ಲಾಕಿಂಗ್ ದಂಧೆ ನಡೆಸುತ್ತಿದೆ: ಕಾಂಗ್ರೆಸ್ ಗಂಭೀರ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights