ಸ್ಟಾರ್ ಹೋಟೆಲ್‌ಗಳಲ್ಲಿ ನಡೆಸುವ ವ್ಯಾಕ್ಸಿನೇಷನ್ ನಿಯಮಗಳಿಗೆ ವಿರುದ್ಧ : ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೋಟೆಲ್‌ಗಳ ಸಹಯೋಗದೊಂದಿಗೆ ನೀಡುತ್ತಿರುವ ಕೋವಿಡ್ -19 ವ್ಯಾಕ್ಸಿನೇಷನ್ ಪ್ಯಾಕೇಜ್‌ಗಳು ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕಾಗಿ ನೀಡಲಾದ ಮಾರ್ಗಸೂಚಿಗಳಿಗೆ ವಿರುದ್ಧವಾಗಿವೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಗಸೂಚಿಗಳ ಪ್ರಕಾರ, ಕೋವಿಡ್ ವ್ಯಾಕ್ಸಿನೇಷನ್ ಅನ್ನು ಸರ್ಕಾರಿ ಕೇಂದ್ರ, ಖಾಸಗಿ ಆಸ್ಪತ್ರೆ ನಡೆಸುವ ಖಾಸಗಿ ಕೇಂದ್ರ, ಸರ್ಕಾರಿ ಅಥವಾ ಖಾಸಗಿ ಕಚೇರಿಗಳು ಮತ್ತು ವೃದ್ಧರಿಗೆ ಮತ್ತು ವಿಭಿನ್ನ ಸಾಮರ್ಥ್ಯದವರಿಗೆ (ತಾತ್ಕಾಲಿಕ ಆಧಾರದ ಮೇಲೆ) ಮನೆಯಿಂದ ಹತ್ತಿರವಿರುವ ಕೇಂದ್ರಗಳಲ್ಲಿ ಮಾತ್ರ ನಡೆಸಬಹುದಾಗಿದೆ.

ಆದ್ದರಿಂದ, ಸ್ಟಾರ್ ಹೋಟೆಲ್‌ಗಳಲ್ಲಿ ನಡೆಸುವ ವ್ಯಾಕ್ಸಿನೇಷನ್ ನಿಯಮಗಳಿಗೆ ವಿರುದ್ಧವಾಗಿದೆ. ಹೀಗಾಗಿ ಇದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆರೋಗ್ಯ ಸಚಿವಾಲಯದ ಸೂಚನೆ ತಿಳಿಸಿದೆ.

ಈ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗುವುದು. ಮಾರ್ಗಸೂಚಿಗಳ ಪ್ರಕಾರ ದೇಶದಲ್ಲಿ ಕೋವಿಡ್ -19 ವ್ಯಾಕ್ಸಿನೇಷನ್ ಡ್ರೈವ್ ನಡೆಯುತ್ತಿದೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದೆ.

ಇತ್ತೀಚಿನ ದಿನಗಳಲ್ಲಿ, ಅಂತಹ ಅನೇಕ ಹೋಟೆಲ್ ವ್ಯಾಕ್ಸಿನೇಷನ್ ಪ್ಯಾಕೇಜುಗಳು ಹೊರಬಂದಿವೆ. ಇದರ ಬಗ್ಗೆ ಖಚಿತಪಡಿಸಿಕೊಳ್ಳಲು ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights