ಸಿಲಿಂಡರ್ ಸ್ಫೋಟ : 2 ಮನೆ ಕುಸಿದು 3 ಮಕ್ಕಳು ಸೇರಿ ಏಳು ಜನ ಸಾವು..!
ಉತ್ತರ ಪ್ರದೇಶದ ಗೊಂಡಾದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು 2 ಮನೆಗಳು ಕುಸಿದು 3 ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ.
ಜೂನ್ 01 ರಂದು ಉತ್ತರ ಪ್ರದೇಶ ಗೊಂಡಾದಲ್ಲಿ ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಕುಸಿದು ಏಳು ಜನರು ಸಾವನ್ನಪ್ಪಿದ್ದು ಏಳು ಮಂದಿ ಗಾಯಗೊಂಡಿದ್ದಾರೆ. ವಜೀರ್ ಗಂಜ್ನ ಟಿಕ್ರಿ ಗ್ರಾಮದಲ್ಲಿ ಈ ದುರಂತ ಘಟನೆ ಸಂಭವಿಸಿದೆ.
ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದಾಗಿ 2 ಮನೆಗಳು ಕುಸಿದಿವೆ. ಘಟನೆಯಲ್ಲಿ 14 ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಮತ್ತು 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಸಂತೋಷ್ ಕುಮಾರ್ ಮಿಶ್ರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.