ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿಹೊತ್ತಿಕೊಳ್ಳುತ್ತೆ: ಸಚಿವ ಯೋಗೇಶ್ವರ್
ನಾನು ಸಿಎಂ ಯಡಿಯೂರಪ್ಪನವರ ಎಂದೂ ಮಾತನಾಡಿರಲಿಲ್ಲ, ಈಗಲೂ ಮಾತನಾಡುವುದಿಲ್ಲ. ಒಂದು ವೇಳೆ ನಾನು ಅವರ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಯಡಿಯೂರಪ್ಪ, ಹೈಕಮಾಂಡ್ ಸೂಚಿಸಿದರೆ ತಾವು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಇಂದು ಮುಖ್ಯಮಂತ್ರಿ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಕೇಳುತ್ತಿದ್ದೇನೆ, ನನಗೆ ಆ ಬಗ್ಗೆ ಸ್ಪಷ್ಟತೆ ಇಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19 ನಿರ್ವಹಣೆಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದಷ್ಟೇ ಹೇಳಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ. ಪಕ್ಷದ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತಾರೆ. ಯಾರು ಬೇಕು, ಬೇಡವೆಂದು ವರಿಷ್ಠರು ನಿರ್ಧರಿಸುತ್ತಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರೋಹಿಣಿ – ಶಿಲ್ಪನಾಗ್ ಕಚ್ಚಾಟ ವರ್ಗಾವಣೆಯಲ್ಲಿ ಅಂತ್ಯ: ಕೆಲಸವಿಲ್ಲದ ಖಾತೆಗೆ ಸಿಂಧೂರಿ ವರ್ಗಾವಣೆ!

