ಮೋದಿ-ಯೋಗಿ ನಡುವೆ ಭಿನ್ನಮತ; ಯುಪಿ ಸಿಎಂ ಬದಲಾವಣೆ?; ಬಿಜೆಪಿ ಹೇಳಿದ್ದೇನು?

ಸೆಲೆಬ್ರಟಿಗಳು, ಪಕ್ಷದ ಮುಖಂಡರು, ವಿಪಕ್ಷಗಳ ನಾಯಕರ ಹುಟ್ಟಿದ ಹಬ್ಬಕ್ಕೆ ಮರೆಯದೇ ಶುಭಾಷಯ ಕೋರುತ್ತಿದ್ದ ಪ್ರಧಾನಿ ಮೋದಿ, ಮೊನ್ನೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ಹುಟ್ಟು ಹಬ್ಬಕ್ಕೆ ಶುಭಾ ಕೋರದೇ ಉಳಿಸಿದ್ದರು. ಹೀಗಾಗಿ ಅವರ ನಡುವೆ ಇದ್ದ ಒಳ ಮುನಿಸು ಇದೀಗ ಬಹಿರಂಗಗೊಂಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಅಲ್ಲದೆ, ಉತ್ತರ ಪ್ರದೇಶದಲ್ಲಿ ಯೋಗಿ ಅವರನ್ನು ಸಿಎಂ ಖುರ್ಚಿಯಿಂದ ಇಳಿಸುವ ಸಾಧ್ಯತೆಯೂ ಇದೆ ಎಂದೂ ಹೇಳಲಾಗಿತ್ತು. ಇಂತಹ ಗೊಂದಲಗಳು, ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಜೆಪಿ, ಮೋದಿ ಮತ್ತು ಯೋಗಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಿಎಂ ಬದಲಾಯಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

ರಾಷ್ಟ್ರಿಯ ನಾಯಕರು ಮತ್ತು ಮುಖ್ಯಮಂತ್ರಿ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಕೇವಲ ಕಾಲ್ಪನಿಕ ವರದಿಗಳನ್ನು ಸೃಷ್ಟಿಸಲಾಗುತ್ತಿದೆ’ ಎಂದು ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ಸಿಂಗ್‌ ಹೇಳಿದ್ದಾರೆ.

ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಅವರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದರು.
2022ರ ಮಾರ್ಚ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ಸಚಿವ ಸಂಪುಟ ಪುನರ್‌ರಚನೆ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶನಿವಾರ ರಾತ್ರಿ ರಾಧಾ ಮೋಹನ್‌ ಸಿಂಗ್‌ ಅವರು, ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್‌ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಸುನೀಲ್‌ ಬನ್ಸಲ್‌ ಅವರ ಜತೆ ಸಭೆ ನಡೆಸಿದ್ದು ಹಲವು ಉಹಾಪೋಹಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಪದಚ್ಯುತಿ?; ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬೇಡಿಕೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights