ನನ್ನ ವರ್ಗಾವಣೆ ಹಿಂದೆ ಭೂ ಮಾಫಿಯಾ ಪಿತೂರಿ ಇದೆ: ರೋಹಿಣಿ ಸಿಂಧೂರಿ
ನನ್ನ ವರ್ಗಾವಣೆ ಹಿಂದೆ ಭೂ ಮಾಫಿಯಾ ಪಿತೂರಿಯಿದೆ. ಎಲ್ಲಾದಕ್ಕೂ ಜನರು ಸಾಕ್ಷಿಯಾಗಿದ್ದಾರೆ. ಎಲ್ಲಾ ಕಡೆ ಇದು ಸಾಮಾನ್ಯವಾಗಿದೆ. ಏನೇನು ನಡೆದಿದೆ ಎಂಬುದನ್ನು ಅಧಿಕಾರಿಗಳು ಎಲ್ಲವನ್ನು ಹೇಳಲು ಸಾಧ್ಯವಿಲ್ಲ, ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸುವುದಷ್ಟೇ ನನ್ನ ಗುರಿ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಸಿಂಧೂರಿ ಮತ್ತು ಶಿಲ್ಪಾನಾಗ್ ನಡುವಿನ ಜಟಾಪಟಿಯಿಂದಾಗಿ ಇಬ್ಬರನ್ನೂ ವರ್ಗಾವಣೆ ಮಾಡಲಾಗಿದೆ. ತಮ್ಮ ವರ್ಗಾವಣೆಯನ್ನು ಹಿಂದೆ ಪಿತೂರಿ ಇದೆ ಎಂದು ಸಿಂಧೂರಿ ಆರೋಪಿಸಿದ್ದಾರೆ.
ಅಯ್ಯಜನಹುಂಡಿ ಮತ್ತು ಕೀರ್ಗಳ್ಳಿ ಕೆರೆಗಳ ಸುತ್ತಲಿನ ಒತ್ತುವರಿಯನ್ನು ತೆರವುಗೊಳಿಸಲು ನಾವು ಕ್ರಮ ಕೈಗೊಂಡಿದ್ದೇವೆ. ಕುರುಬರಹಳ್ಳಿಯಲ್ಲಿ ಸರ್ವೆ ಸಂಖ್ಯೆಯಲ್ಲಿ ಕೆಲವು ಸಮಸ್ಯೆಗಳಿದ್ದು ಅದು ಸುಪ್ರೀಂ ಕೋರ್ಟ್‌ಗೆ ಹೋಯಿತು. ಕೋರ್ಟ್ ನಲ್ಲಿ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ಸಮರ್ಥಿಸಿಕೊಂಡಿದ್ದೇವೆ ಎಂದು ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಹೀಗೆ ಯಾವ ಜಿಲ್ಲೆಯಲ್ಲಿ, ಸಂಸ್ಥೆಯಲ್ಲಿ ನಡೆದರೂ ಸಂಸ್ಥೆ ನಡೆಸುವುದು ಕಷ್ಟವಾಗುತ್ತದೆ, ಆದರೆ ನನಗೆ ಶಿಲ್ಪಾ ನಾಗ್ ಅವರ ಹತಾಶೆ, ಅಭದ್ರತೆ ಬಗ್ಗೆ ಅನುಕಂಪವಿದೆ. ಈಗ ಜನರಿಗೆ ಬೇಕಿರುವುದು ಕೋವಿಡ್ ನಿರ್ವಹಣೆ, ಅದು ಆಗಲಿ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಪಾಲಿಕೆ ಆಯುಕ್ತರ ಮೇಲೆ ಹಲ್ಲೆ; ಮೇಯರ್ ಸೇರಿ ಬಿಜೆಪಿ ಕೌನ್ಸಿಲರ್‌ಗಳ ಅಮಾನತು!