ಪತಿಯೊಂದಿಗೆ ಕಲಹ; ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಮಹಿಳೆ ಮತ್ತು ಐವರು ಹೆಣ್ಣು ಮಕ್ಕಳು ಆತ್ಮಹತ್ಯೆ!

ಕೌಂಟುಬಿಕ ಕಲಹದಿಂದಾಗಿ ಮಹಿಳೆ ಮತ್ತು ಆಕೆಯ ಐವರು ಹೆಣ್ಣು ಮಕ್ಕಳು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಛತ್ತೀಸ್‌ಗಢದ ಮಹಾಸಮುಂಡ್ ಜಿಲ್ಲೆಯಲ್ಲಿ ನಡೆದಿದೆ.

ಮಹಾಸಮುಂಡ್ ಮತ್ತು ಬೆಲ್ಸೊಂಡಾ ನಡುವಿನ ರೈಲ್ವೆ ಕ್ರಾಸಿಂಗ್ ಬಳಿ ಬುಧವಾರ ಮಧ್ಯರಾತ್ರಿ ಘಟನೆ ನಡೆದಿದೆ. ಮೃತರನ್ನು ಉಮಾ ಸಾಹು (45), ಅನ್ನಪೂರ್ಣ (18), ಯಶೋದ (16), ಭೂಮಿಕಾ (14), ಕುಂಕುಮ್ (12) ಮತ್ತು ತುಳಸಿ (10) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಮ್ಚಾ ಗ್ರಾಮದ 45 ವರ್ಷದ ಉಮಾ ಸಾಹು ತನ್ನ ಪತಿಯೊಂದಿಗೆ ಬುಧವಾರ ರಾತ್ರಿ ಊಟಕ್ಕೆ ಸಂಬಂಧಿಸಿದಂತೆ ಮತ್ತು ಕೆಲವು ವಿಷಯಗಳ ಬಗ್ಗೆ ಜಗಳವಾಡಿಕೊಂಡು ಮಕ್ಕಳೊಂದಿಗೆ ನಾಪತ್ತೆಯಾಗಿದ್ದರು.

ಆದರೆ ಅವಳ ಪತಿ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಬದಲಿಗೆ ತಮ್ಮ ಸಂಬಂಧಿಕರ ಮನೆಗಳಲ್ಲಿ ಅವರನ್ನು ಹುಡುಕುತ್ತಿದ್ದನು. ಗುರುವಾರ ಬೆಳಿಗ್ಗೆ ಯಾರೋ ರೈಲು ಹಳಿಗಳಲ್ಲಿ ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮಹಾಸಮುಂಡ್ ಪೊಲೀಸ್ ಅಧೀಕ್ಷಕ ಪ್ರಫುಲ್ ಠಾಕೂರ್ ತಿಳಿಸಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣದಂತೆ ತೋರುತ್ತಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ. ಆತ್ಮಹತ್ಯೆ ಪತ್ರಗಳು ಪತ್ತೆಯಾಗಿಲ್ಲ ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮಾತ್ರವಲ್ಲ ರಾಜಸ್ಥಾನದಲ್ಲೂ ಬಿಜೆಪಿ ಅಂತರ್ಯುದ್ಧ; ಹೋರ್ಡಿಂಗ್‌ನಿಂದ ಬಹಿರಂಗ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights