ತೆಲಂಗಾಣ: TRS ಪಕ್ಷದ ಶಾಸಕ ಎಟೆಲಾ ರಾಜೇಂದರ್ ರಾಜೀನಾಮೆ; ಜೂನ್‌ 14ಕ್ಕೆ BJPಗೆ ಸೇರಲಿದ್ದಾರೆ!

ತೆಲಂಗಾಣದ ಮಾಜಿ ಆರೋಗ್ಯ ಸಚಿವ, ಹಾಲಿ ಶಾಸಕರಾಗಿದ್ದ, ಟಿಆರ್‌ಎಸ್‌ ಪಕ್ಷದ ಹಿರಿಯ ನಾಯಕ ಎಟೆಲಾ ರಾಜೇಂದರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದಾರೆ. ಅವರು ಜೂನ್‌ 14 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತೆಲಂಗಾಣ ವಿಧಾನಸಭೆಯಲ್ಲಿ ಹುಜೂರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ.

ನಾನು ಸ್ಪೀಕರ್‌ ಅವರಿಗೆ ನೇರವಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಬೇಕು ಎಂದಿದ್ದೆ. ಆದರೆ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಹಾಗಾಗಿ ನಾನು ರಾಜೀನಾಮೆ ಪತ್ರವನ್ನು ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ಸಲ್ಲಿಸಿದ್ದೇನೆ ಎಂದು ರಾಜೇಂದರ್‌ ತಿಳಿಸಿದ್ದಾರೆ.

‘ರಾಜೇಂದರ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಜೂನ್ 14 ರಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇವರಲ್ಲದೆ, ಇನ್ನೂ ಕೆಲವು ಟಿಆರ್‌ಎಸ್‌ ನಾಯಕರು ಕೂಡ ಬಿಜೆ‍‍ಪಿಗೆ ಸೇರಲಿದ್ದಾರೆ ಎಂದು ಹೇಳಲಾಗಿದೆ.

ರಾಜೇಂದರ್‌ ಅವರ ಕುಟುಂಬದ ಸದಸ್ಯರ ಒಡೆತನದ ಸಂಸ್ಥೆಗಳು, ಸರ್ಕಾರಿ ಜಮೀನುಗಳನ್ನು ಕಬಳಿಸಿವೆ ಎಂಬ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ: RJD ನಾಯಕರನ್ನು ಭೇಟಿಯಾದ ಜಿತನ್‌ ಮಾಂಜಿ; BJP ನೇತೃತ್ವದ NDA ತೊರೆಯುತ್ತಾ HAM ಪಕ್ಷ?!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights