ಮಾನಸಿಕ ಅಸ್ವಸ್ಥನ ಸಾವು; ವಿರಾಜಪೇಟೆ ಸಬ್‌ ಇನ್ಸ್‌ಪೆಕ್ಟರ್‌ ಅಮಾನತು!

ವಿರಾಜಪೇಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಸಾವನ್ನಪ್ಪಿದ್ದಾನೆ. ಆತನನ್ನು ಪೊಲೀಸರು ಪೊಲೀಸ್‌ ಠಾಣೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದಾರೆ. ಈಗಾಗಿಯೇ ಆತ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐ ಸೇರಿದಂತೆ 08 ಪೊಲೀಸ್‌ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಪೊಲೀಸರು ತನ್ನ ಮಗನಿಗೆ ಥಳಿಸಿದ್ದಾರೆ ಎಂದು ಮೃತನ ತಾಯಿ ದೂರು ನೀಡಿದ್ದಾರೆ. ದೂರಿ ಸ್ವೀಕರಿಸಿದ ನಂತರ, ದಕ್ಷಿಣ ವಲಯ ಐಜಿಪಿ ಪ್ರವೀಣ್‌ ಮಧುಕರ್‌ ಪವಾರ್‌ ಶನಿವಾರ ವೀರಾಜಪೇಟೆ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಬ್‌ಇನ್ಸ್‌ಪೆಕ್ಟರ್ ಜಗದೀಶ್‌ ಧೂಳ ಶೆಟ್ಟಿ, ಐವರು ಪೊಲೀಸ್ ಕಾನ್ಸ್‌ಟೇಬಲ್‌ ಹಾಗೂ ಇಬ್ಬರು ಹೋಂ ಗಾರ್ಡ್‌ಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಓಡಿಗೆ ಒಪ್ಪಿಸಲಾಗುವುದು. 8 ಮಂದಿ ಪೊಲೀಸರ ವಿರುದ್ದ ಎಫ್‌ಐಆರ್ ದಾಖಲಾಗಿದೆ. ಹಲ್ಲೆ ಪ್ರಕರಣದಿಂದ ವ್ಯಕ್ತಿ ಸಾವನ್ನಪ್ಪಿರುವ ಕುರಿತು ಪಾರದರ್ಶಕ, ನಿಷ್ಪಕ್ಷಪಾತ ತನಿಖೆ ನಡೆಯುತ್ತದೆ. ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡಯಲಾಗಿದೆ. ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ತಪ್ಪಿತಸ್ಥರ ವಿರುದ್ದ ಶಿಸ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಐಜಿಪಿ ತಿಳಿಸಿದ್ದಾರೆ.

ಇದನ್ನೂ ಓದಿ: ಶತಕ ಬಾರಿಸಿದ ಪೆಟ್ರೋಲ್‌ ಬೆಲೆ; ಸಿಹಿ ಹಂಚಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ!

ವಿರಾಜಪೇಟೆಯ ಚಿಕ್ಕಪೇಟೆ ನಿವಾಸಿ ರಾಯ್ ಡಿಸೋಜಾ ಮಾನಸಿಕ ಅಸ್ವಸ್ಥನಾಗಿದ್ದು, ಅವರನ್ನು ಜೂನ್‌ 9 ರಂದು ರಾತ್ರಿ ಪೊಲೀಸರು ಠಾಣೆಗೆ ಕರೆದೊಯ್ದು ಥಳಿಸಿದ್ದಾರೆ. ಗಾಯಗೊಂಡಿದ್ದ ಆತ ಮೃತಪಟ್ಟಿದ್ದರು ಎಂದು ಆರೋಪಿಸಲಾಗಿದೆ.

ಪ್ರಕರಣದ ಬಗ್ಗೆ ಇಲಾಖೆಯ ಮಟ್ಟದಲ್ಲಿ ತನಿಖೆ ನಡೆಸುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಹೇಳಿದ್ದರು. ಮಾನಸಿಕ ಅಸ್ವಸ್ಥ ರಾಯ್ ತಮ್ಮ ಮನೆ ಬಳಿ ಕತ್ತಿ ಹಿಡಿದುಕೊಂಡು ತಿರುಗಾಡುತಿದ್ದ ಎಂಬ ಅರೋಪದಡಿಯಲ್ಲಿ ರಾತ್ರಿ 12 ಘಂಟೆಗೆ ಠಾಣೆಗೆ ಕರೆದೊಯ್ದು 3 ಘಂಟೆಗೆ ಬಿಟ್ಟು ಕಳಿಸಿದರೆನ್ನಲಾಗಿದೆ. ಆದರೆ ಪೋಲೀಸರ ಹೊಡೆತದಿಂದಾಗಿ ಅವರು ತೀವ್ರ ಅಸ್ವಸ್ಥಗೊಂಡಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಈ ಘಟನೆಗೆ ಇಡೀ ಜಿಲ್ಲಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ಮಾನಸಿಕ ಅಸ್ವಸ್ಥನ ಮೇಲೆಯೂ ದೌರ್ಜನ್ಯ ನಡೆಸಿದ ಪೊಲೀಸರ ಬಂಧನಕ್ಕೆ ಜೆಡಿಎಸ್‌, ಕಾಂಗ್ರೆಸ್‌, ಎಸ್‌ಡಿಪಿಐ ಮುಖಂಡರು ಒತ್ತಾಯಿಸಿದ್ದರು.

ಇದನ್ನೂ ಓದಿ: ಶರತ್ ಬಚ್ಚೇಗೌಡರ ಕುಟುಂಬ 229 ಎಕರೆ ಭೂಮಿ ಕಬಳಿಸಿದೆ: ಸಚಿವ ಎಂಟಿಬಿ ನಾಗರಾಜ್ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights