ಮದ್ಯ ಮಾಫಿಯಾ ಕುರಿತು ವರದಿ ಮಾಡಿದ್ದ ಪತ್ರಕರ್ತ ರಸ್ತೆ ಅಪಘಾತದಲ್ಲಿ ಸಾವು!

ನ್ಯೂಸ್‌ ಚಾನೆಲ್‌ವೊಂದರ ವರದಿಗಾರರೊಬ್ಬರು ತಮ್ಮ ಬೈಕ್‌ನಲ್ಲಿ ಸಂಚರಿಸುವಾಗ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಪ್ರತಾಪ್‌ಘರ್ ಪೊಲೀಸರು ತಿಳಿಸಿದ್ದಾರೆ.

ವರದಿಗಾರ, 42 ವರ್ಷದ ಸುಲಭ್ ಶ್ರೀವಾಸ್ತವ ಅವರು ಇತ್ತೀಚೆಗೆ ಮದ್ಯ ಮಾಫಿಯಾ ವಿರುದ್ಧ ಸುದ್ದಿ ಮಾಡಿದ್ದರು. ಅಲ್ಲದೆ, ಎರಡು ದಿನಗಳ ಹಿಂದೆ ಅವರು ರಕ್ಷಣೆ ಕೋರಿ ಆಡ್ಲ್ ಡಿಜಿಪಿ (ಪ್ರಯಾಗ್ರಾಜ್ ವಲಯ) ಪ್ರೇಮ್ ಪ್ರಕಾಶ್ ಅವರಿಗೆ ಪತ್ರ ಬರೆದಿದ್ದರು.

ಭಾನುವಾರ ಶ್ರೀವಾಸ್ತವ ಅವರು ಲಾಲ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಅಶ್ರಹಿ ಗ್ರಾಮದಿಂದ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರ ಬೈಕ್‌ ಇಟ್ಟಿಗೆಗೂಡಿನ ಬಳಿಯಿದ್ದ ಕಂಬಕ್ಕೆ ಗುದ್ದಿದ್ದು, ಅವರು ಸಾವನ್ನಪ್ಪಿದ್ದಾರೆ ಎಂದು ಆಡ್ಲ್ ಎಸ್ಪಿ ಸುರೇಂದ್ರ ದ್ವಿವೇದಿ ತಿಳಿಸಿದ್ದಾರೆ.

ಅಪಘಾತದ ನಂತರ, ಶ್ರೀವಾಸ್ತವ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಪೊಲೀಸರು ವಿವಿಧ ಆಂಗಲ್‌ಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಮತ್ತು ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Read Also: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ – ಸಿಎಂ ಘೋಷಣೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights