ರಾಷ್ಟ್ರ ಪ್ರಶಸ್ತಿ ವಿಜೇತ, ನಟ ಸಂಚಾರಿ ವಿಜಯ್ ವಿಧಿವಶ!
ರಸ್ತೆ ಅಪಘಾತಕ್ಕೀಡಾಗಿ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ, ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಶನಿವಾರ ರಾತ್ರಿ ತಮ್ಮ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದ ವಿಜಯ್ ಅವರ ಬೈಕ್ ಅಪಘಾತಕ್ಕೀಡಾಗಿ, ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಾದಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಮೆದುಳಿನಲ್ಲಿ ರಕ್ತಸ್ರಾವವಾಗಿದ್ದರಿಂದ ಕೋಮ ಸ್ಥಿತಿಯಲ್ಲಿದ್ದರು. ಐಸಿಯುನಲ್ಲಿ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಕೂಡ, ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ, ಸಿಂಗಟಗೆರೆ ಹೋಬಳಿಯ, ರಂಗಾಪುರ ಗ್ರಾಮದ ಅವರು, ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ರಂಗಭೂಮಿ ಕಲಾವಿದರಾಗಿ ಸಿನೆಮಾ ಕ್ಷೇತ್ರಕ್ಕೆ ಕಾಲಿಟ್ಟ ಇವರು, ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇವರು ನಟಿಸಿದ್ದ ನಾನು ಅವನಲ್ಲ…ಅವಳು ಕನ್ನಡ ಸಿನಿಮಾ ಚಿತ್ರಕ್ಕೆ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ, ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿತ್ತು. ಈ ಚಿತ್ರದಲ್ಲಿ ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ.
ನಾತಿಚರಾಮಿ, ದಾಸವಾಳ, ಪಾದರಸ, ವರ್ತಮಾನ, ಒಗ್ಗರಣೆ, ರಂಗಪ್ಪ ಹೋಗ್ಬಿಟ್ನ, ಉಲವಚಾರು ಬಿರಿಯಾನಿ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ: ಶ್ರೀರಾಮನ ಹೆಸರಲ್ಲಿ ಭ್ರಷ್ಟಾಚಾರ; ಟ್ರಸ್ಟ್ ವಿರುದ್ದ 16 ಕೋಟಿ ರೂ ಅವ್ಯವಹಾರ ಆರೋಪ!