ಹಸುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದನೆಂದು ವ್ಯಕ್ತಿಯನ್ನು ಥಳಿಸಿ ಕೊಂದ ಜನರು!

ಹಸುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಜನರ ಗುಂಪೊಂದು ಸಾಮೂಹಿಕವಾಗಿ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಚಿತ್ತೋರ್‌ಗರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯನ್ನು ಇನ್ನೊಬ್ಬರು ಗಾಯಗೊಂಡಿದ್ದರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹತ್ಯೆಗೀಡಾದ ವ್ಯಕ್ತಿಯನ್ನು ಬಾಬು ಭಿಲ್ (25) ಎಂದು ಗುರುತಿಸಲಾಗಿದ್ದು, ಪಿಂಟು ಭಿಲ್‌ಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 7-8 ಜನರನ್ನು ವಶಕ್ಕೆ ಪಡೆಯಲಾಗಿದೆ.

ಬಾಬು ಮತ್ತು ಪಿಂಟು ಕೆಲವು ಹಸುಗಳನ್ನು ಮಧ್ಯಪ್ರದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದಾಗ ಆರೋಪಿಗಳು ಜೂನ್ 13-14ರ ಮಧ್ಯರಾತ್ರಿಯಲ್ಲಿ ಭಿಲ್ಖಂಡ ಬಳಿ ಹಿಡಿದು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಪ್ರಕರಣ ದಾಖಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕ್ರಿಮಿನಲ್‌ ಬ್ರಾಂಚ್‌ನ ಹೆಚ್ಚುವರಿ ಮಹಾನಿರ್ದೇಶಕ ರವಿ ಮೆಹರ್ಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ LJP ಪಕ್ಷದಲ್ಲಿ ಬಂಡಾಯ; ಚಿರಾಗ್‌ ನಾಯಕತ್ವ ಬದಲಾವಣೆಗೆ ಸಿಎಂ ನಿತೀಶ್‌ ಕುಮಾರ್ ಸಂಚು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights