ಬೆಂಗಳೂರಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ತರಬೇಕು: ಸಿಎಂ ಯಡಿಯೂರಪ್ಪ

ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ 20 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಸಡಿಲಿಸಿ ಮಾಡಿದ್ದು, ಅನ್‌ಲಾಕ್‌ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ಬೆಂಗಳೂರಿಗೆ ಹೆಚ್ಚು ಜನರ ಮರು ವಲಸೆ ಆರಂಭವಾಗಲಿದ್ದು, ಮತ್ತೆ ಕೊರೋನಾ ಸೋಂಕಿನಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ. ಹಾಗಾಗಿ ಬೆಂಗಳೂರಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ತರಲೇಬೇಕು ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ.

ದೇಶದ ಬೇರೆ ಬೇರೆ ರಾಜ್ಯಗಳು ಮತ್ತು ಇತರ ಜಿಲ್ಲೆಗಳಿಂದ ಕಾರ್ಮಿಕರು, ಉದ್ಯೋಗಿಗಳು ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ. ಇಂದು ಜೂನ್‌ 14 ರಿಂದ ಬೆಂಗಳೂರು ಅನ್‌ಲಾಕ್‌ ಆಗಿರುವ ಕಾರಣ ಬಹುತೇಕರು ತಮ್ಮ ತಮ್ಮ ಕೆಲಸ ಮತ್ತು ಉದ್ಯೋಗಗಳಿಗೆ ತೆರಳಲಿದ್ದಾರೆ. ಇದೆಲ್ಲದರ ಪರಿಣಾಮ ಬೆಂಗಳೂರಿನಲ್ಲಿ ಜನದಟ್ಟಣೆ ಹೆಚ್ಚಲಿದೆ. ಹಾಗೂ ಮೆಜೆಸ್ಟಿಕ್‌ ರೈಲ್ವೆ ನಿಲ್ಧಾಣ ಮುಂತಾದ ಕಡೆ ಜನ ಸಂದಣಿ ಉಂಟಾಗಲಿದೆ. ಇದೆಲ್ಲದರ ಪರಿಣಾಮ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಹೊರಗಡೆಯಿಂದ ಬೆಂಗಳೂರು ಪ್ರವೇಶಿಸುವವರಿಗೆ ಕಡ್ಡಾಯ ಕೊರೋನಾ ನೆಗೆಟಿವ್‌ ವರದಿಯನ್ನು ತರುವಂತೆ ಸಹ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಜಿಲ್ಲಾ ಪ್ರವಾಸದಿಂದ ಮರಳಿದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ಈ ಸಂಬಂಧ ಕೊರೋನಾ ಟೆಸ್ಟ್‌ ನೆಗೆಟಿವ್‌ ವರದಿಯ ಕುರಿತು ಅಧಿಕಾರಿಗಳಿಗೆ ತಿಳಿಸುತ್ತೇನೆ. ಬೆಂಗಳೂರಿಗೆ ಬರುವವರನ್ನು ಕೊರೋನಾ ಟೆಸ್ಟ್‌ಗೆ ಒಳಪಡಿಸುವ ವ್ಯವಸ್ಥೆ ಮಾಡುವಂತೆ ಆದೇಶಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿ 20 ಜಿಲ್ಲೆಗಳು ಅನ್‌ಲಾಕ್‌; ಯಥಾಸ್ಥಿತಿಯ ಲಾಕ್‌ಡೌನ್‌ನಲ್ಲಿ 11 ಜಿಲ್ಲೆಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights