ಕಾನ್ಸ್ಟೇಬಲ್ ಪರೀಕ್ಷೆ ಬರೆದ ನಕಲಿ ಅಭ್ಯರ್ಥಿಗಳು; 61 ಮಂದಿ ಬಂಧನ; ಐವರು ಪೇದೆಗಳ ವಜಾ!
2020ರ ನವೆಂಬರ್ನಲ್ಲಿ ನಡೆದ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಪರೀಕ್ಷಾ ಅಭ್ಯರ್ಥಿಗಳ ಪರವಾಗಿ ಹಲವಾರು ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 61 ಮಂದಿ ನಕಲಿ ಅಭ್ಯರ್ಥಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಕಾನ್ಸ್ಟೇಬಲ್ಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ಕಳದ ವರ್ಷದ ಕಾನ್ಸ್ಸ್ಟಬಲ್ ಹುದ್ದೆಗೆ ಕರೆಯಲಾಗಿತ್ತು. ಹಲವಾರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಕೆಲವು ಅಭ್ಯರ್ಥಿಗಳ ಹೆಸರಿನಲ್ಲಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದಾಗಿ ತಿಳಿದು ಬಂದಿತ್ತು. ಈ ಸಂಬಂಧ ಬೆಂಗಳೂರಿನಲ್ಲಿ 11 ಪ್ರಕರಣ, ಬೆಳಗಾವಿಯಲ್ಲಿ 5 ಪ್ರಕರಣ ಸೇರಿದಂತೆ ಒಟ್ಟು 21 ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ವರ್ಗಾಹಿಸಿತ್ತು. ತನಿಖೆ ನಡೆಸಿರುವ ಸಿಐಡಿ ಪೊಲೀಸರು 61 ಆರೋಪಿಗಳನ್ನು ಬಂಧಿಸಿದ್ದಾರೆ. ಅಭ್ಯರ್ಥಿಗಳ ಹೆಸರಿನಲ್ಲಿ ಪರೀಕ್ಷೆ ಬರೆದಿದ್ದ ಐವರು ಕಾನ್ಸ್ಟೇಬಲ್ಗಳನ್ನು ರಾಜ್ಯ ಸರ್ಕಾರ ಕೆಲಸದಿಂದ ವಜಾ ಮಾಡಿದೆ. 21 ಅಭ್ಯರ್ಥಿಗಳನ್ನು ಶಾಶ್ವತವಾಗಿ ಯಾವುದೇ ಪರೀಕ್ಷೆ ಬರೆಯದಂತೆ ಡಿಬಾರ್ ಮಾಡಲಾಗಿದೆ.
ಬಂಧಿತ ಆರೋಪಿಗಳು ಅಸಲಿ ಅಭ್ಯರ್ಥಿಯ ಆಧಾರ್ ಕಾರ್ಡ್ನಲ್ಲಿ ನಕಲಿ ಅಭ್ಯರ್ಥಿಗಳ ಪೋಟೋ ಬದಲಾಯಿಸುತ್ತಿದ್ದರು. ಗೋಕಾಕ್ನ ಪೋಟೋ ಸ್ಟುಡಿಯೋವೊಂದರಲ್ಲಿ ಈ ಕೆಲಸ ಮಾಡಲಾಗುತ್ತಿತ್ತು. ಅಲ್ಲಿ ಪರೀಕ್ಷೆಯ ನಕಲಿ ದಾಖಲೆ ಸೃಷ್ಟಿಸಿರೋದು ಪತ್ತೆಯಾಗಿದೆ ಎನ್ನಲಾಗಿದೆ. ಬಂಧಿತರಿಂದ 1.54 ಲಕ್ಷ ರೂಪಾಯಿ ನಗದು, ಎರಡು ಕಾರು, ಹಾರ್ಡ್ ಡಿಸ್ಕ್ ಮತ್ತು ಮೊಬೈಲ್ ಪೋನ್ಗಳನ್ನು ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ಹಸುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದನೆಂದು ವ್ಯಕ್ತಿಯನ್ನು ಥಳಿಸಿ ಕೊಂದ ಜನರು!

