ಮಧ್ಯಪ್ರದೇಶ: ಆನ್‌ಲೈನ್‌ನಲ್ಲಿ ಭಾವನಾತ್ಮಕ ಪತ್ರ ಬರೆದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!

21 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಮಧ್ಯಪ್ರದೇಶದ ರೇವಾದಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆನ್‌ಲೈನ್‌ನಲ್ಲಿ ಭಾವನಾತ್ಮಕವಾಗಿ ಪೋಸ್ಟ್ ಮಾಡಿರುವ ಆತ, ತನ್ನ ಸಾವಿನ ಬಗ್ಗೆ ದುಃಖಿಸಬೇಡಿ ಎಂದು ಕೇಳಿಕೊಂಡಿದ್ದಾರೆ. ಇಲ್ಲದಿದ್ದರೆ ತಾನು ಅವರ ಕನಸಿನಲ್ಲಿ  ಬಂದು ಹೆದರಿಸುವುದಾಗಿ ಹೇಳಿದ್ದಾರೆ.

ಲಕ್ನೋ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದ ವಿದ್ಯಾರ್ಥಿ ಮತ್ತು ಅವರ ಹೆತ್ತವರ ಏಕೈಕ ಪುತ್ರ ಮನ್ವೇಂದ್ರ ಸಿಂಗ್ ಶನಿವಾರ ಸ್ವತಃ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅವರ ಸಂಬಂಧಿಯೊಬ್ಬರು ತಿಳಿಸಿದ್ದಾರೆ.

ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಆಸ್ಪತ್ರೆಗೆ ತಲುಪಿದ ತಕ್ಷಣವೇ ಮೃತಪಟ್ಟರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿಯಲ್ಲಿ ರಾಜಕೀಯ ಸಂಚಲನ; ಅಖೀಲೇಶ್‌ರನ್ನು ಭೇಟಿಯಾದ 09 BSP ಶಾಸಕರು!

“ತನ್ನ ಸಾವಿನಿಂದ ಯಾರಾದರೂ ಅಳುತ್ತಿದ್ದರೆ ನಾನು ಅವರ ಕನಸಿನಲ್ಲಿ ಬಂದು ಹೆದರಿಸುತ್ತೇನೆ. ನನ್ನ ಹೆತ್ತವರು ಘನತೆಯನ್ನು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ನಾನು ಬಯಸಿದ್ದೆ, ಆದರೆ ಅವರನ್ನು ನಾನು ನಿರಾಸೆಗೊಳಿಸಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನಾನು ಏನಾದರೂ ತಪ್ಪು ಹೇಳಿದ್ದರೆ ಅಥವಾ ಮಾಡಿದ್ದರೆ, ಕ್ಷಮಿಸಿ”ಎಂದು ಅವರ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರೇವಾ ನಗರ ಪೊಲೀಸ್ ವರಿಷ್ಠಾಧಿಕಾರಿ (ಸಿಎಸ್‌ಪಿ) ಸಚೀಂದ್ರ ಪ್ರಸಾದ್ ತಿಳಿಸಿದ್ದಾರೆ.

ಆತನ ಕೃತ್ಯದ ಹಿಂದೆ ಅಧ್ಯಯನಗಳ ಒತ್ತಡವೇ ಕಾರಣ ಎಂದು ಇತರ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕ ಸುವೇಂದು ಅಧಿಕಾರಿಗೆ ಲೀಗಲ್‌ ನೋಟಿಸ್‌ ನೀಡಿದ ಟಿಎಂಸಿ ಮಾಜಿ ನಾಯಕ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.