ಹಾನಗಲ್ ಬೈ ಎಲೆಕ್ಷನ್: ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್‌ ಅಭ್ಯರ್ಥಿ ಘೋಷಣೆ!

ಮಾಜಿ ಸಚಿವ, ಶಾಸಕ ಸಿ.ಎಂ.ಉದಾಸಿ ಅವರ ಅಕಾಲಿಕ ಮರಣದಿಂದ ತೆರವಾಗಿರುವ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಆದರೆ, ಇನ್ನೂ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಿಸಿಲ್ಲ. ಆದರೂ, ಹಾನಗಲ್‌ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಖ್ ಅವರನ್ನು JDS ಘೋಷಣೆ ಮಾಡಿದೆ.

ನಿಯಾಜ್ ಶೇಖ್ ಅವರು ಬುಧವಾರ ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾ ಉಪಸ್ಥಿತರಿದ್ದರು.

ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಕಳೆದ ವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಲಿ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ನಿಧಾನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದ್ದು, ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ; ಹೆಚ್ಚಲಿವೆ ಸಾವು-ನೋವುಗಳ ಸಂಖ್ಯೆ; ಮಕ್ಕಳ ಆರೈಕೆಗಾಗಿ ವಿಶೇಷ ವ್ಯವಸ್ಥೆಗೆ ತಜ್ಞರ ಸಲಹೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights