ಟಿಎಂಸಿ ಸೇರಿದ ಶಾಸಕ ಮುಕುಲ್ ರಾಯ್ ಅವರನ್ನು ಅನರ್ಹಗೊಳಿಸಲು ಕೋರಿ ಸ್ಪೀಕರ್‌ಗೆ ಸುವೇಂದು ಪತ್ರ!
ಪಶ್ಚಿಮ ಬಂಗಾಳದಲ್ಲಿ ಹಿರಿಯ ಮುಖಂಡ ಮುಕುಲ್ ರಾಯ್ ಅವರು ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಕೃಷ್ಣನಗರ ಉತ್ತರ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಬಿಜೆಪಿ ಮುಖಂಡ ಮತ್ತು ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಬಂಗಾಳ ವಿಧಾನಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಪಡೆದು ಕೃಷ್ಣನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಮುಕುಲ್ ರಾಯ್ ಗೆಲುವು ಸಾಧಿಸಿದ್ದರು. ಇದೀಗ ಅವರು ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ರಾಯ್ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿತ್ತು. ಇದೀಗ ಅವರನ್ನು ಅನರ್ಹಗೊಳಿಸುವಂತೆ ಸುವೇಂದು ಅಧಿಕಾರಿ ಸ್ಪೀಕರ್‌ಗೆ ಪತ್ರ ಸಲ್ಲಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಬಿಜೆಪಿಯ ಮಾಜಿ ಉಪಾಧ್ಯಕ್ಷ ಮುಕುಲ್ ರಾಯ್ ಕೃಷ್ಣನಗರ ಉತ್ತರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಟಿಎಂಸಿ ಅಭ್ಯರ್ಥಿ ನಟಿ ಕೌಶಾನಿ ಮುಖರ್ಜಿ ಅವರನ್ನು ಸೋಲಿಸಿದ್ದರು. ಆದರೆ, ವಾರಗಟ್ಟಲೆ ಊಹಾಪೋಹಗಳ ನಂತರ, ಮುಕುಲ್ ರಾಯ್ ಮತ್ತು ಅವರ ಪುತ್ರ ಸುಭ್ರಾನ್ಷು ಕಳೆದ ಶುಕ್ರವಾರ ಕೋಲ್ಕತ್ತಾದಲ್ಲಿ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ನಂದಿಗ್ರಾಮದಲ್ಲಿ ಸುವೇಂದು ಗೆಲುವು ಸಂಶಯ: ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಅರ್ಜಿ ಇಂದು ವಿಚಾರಣೆ!