ಪೆಟ್ರೋಲ್‌ ಬೆಲೆ ಏರಿಕೆ: ಸರ್ಕಾರಿ ಉನ್ನತ ಅಧಿಕಾರಿಗಳಿಗೆ ಸಂಸದೀಯ ಸಮಿತಿ ಪ್ರಶ್ನೆ!

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮತ್ತು ಬೆಲೆ ಪರಿಶೀಲಿಸಲು ಏನು ಮಾಡಲಾಗುತ್ತಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಉನ್ನತ ಅಧಿಕಾರಿಗಳನ್ನು ಸಂಸದೀಯ ಸಮಿತಿಯ ಹಲವಾರು ಸದಸ್ಯರು ಗುರುವಾರ ಪ್ರಶ್ನಿಸಿದ್ದಾರೆ.

ಪೆಟ್ರೋಲಿಯಂ ಕಾರ್ಯದರ್ಶಿ ತರುಣ್ ಕಪೂರ್ ಮತ್ತು ಸರ್ಕಾರಿ ಸಂಸ್ಥೆಗಳಾದ ಐಒಸಿಎಲ್, ಬಿಪಿಸಿಎಲ್, ಎಚ್‌ಪಿಸಿಎಲ್ ಮತ್ತು ಗೇಲ್ ಉನ್ನತ ಅಧಿಕಾರಿಗಳು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ಹಾಜರಾಗಿದ್ದರು.

ಸಮಿತಿಯ ಹಲವು ಸದಸ್ಯರು, ಮುಖ್ಯವಾಗಿ ವಿರೋಧ ಪಕ್ಷಗಳ ಸದಸ್ಯರು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಆಗಾಗ್ಗೆ ಏರಿಕೆಯಾಗುತ್ತಿರುವ ಬಗ್ಗೆ ಪ್ರಶ್ನೆಗಳನ್ನು ಮುಂದಿಟ್ಟರು. ಇದು ಸಾಮಾನ್ಯ ಜನರ ಬಜೆಟ್ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಅವರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಅಂತರರಾಷ್ಟ್ರೀಯ ಕಚ್ಚಾ ತೈಲಗಳ ಬೆಲೆಯೊಂದಿಗೆ ಸಂಬಂಧ ಹೊಂದಿವೆ ಎಂದು ಸಚಿವಾಲಯದ ಅಧಿಕಾರಿಗಳು ಸಮಿತಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ಸದಸ್ಯರೊಬ್ಬರು ಅಧಿಕಾರಿಗಳ ವಾದವನ್ನು ಬಲವಾಗಿ ಖಂಡಿಸಿದರು. ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳು ಕಡಿಮೆಯಾದಾಗಲೂ ದೇಶೀಯ ಮಾರುಕಟ್ಟೆಯಲ್ಲಿ  ಇಂಧನ ಬೆಲೆಗಳು ಹೆಚ್ಚಿನ ಮಟ್ಟದಲ್ಲಿರುತ್ತವೆ ಎಂದು ಮೂಲಗಳು ತಿಳಿಸಿವೆ.

ಕೆಲವು ಸದಸ್ಯರು ಚುನಾವಣೆಯ ಆಧಾರದ ಮೇಲೆ ಪೆಟ್ರೋಲಿಯಂ ಬೆಲೆಗಳನ್ನು ಪರಿಷ್ಕರಿಸುವ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಏಳು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಿಂತ ಹೆಚ್ಚಾಗಿದೆ.

ಇದನ್ನೂ ಓದಿ: ತಬ್ಲೀಘಿ ವಿರುದ್ದ ದ್ವೇಷದ ಸುದ್ದಿ ಪ್ರಸಾರ; ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌ 18 ಕನ್ನಡ ಚಾನೆಲ್‌ಗಳಿಗೆ 1.5 ಲಕ್ಷ ದಂಡ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights