ಭದ್ರಾ ಮೇಲ್ದಂಡೆ ಯೋಜನೆ: ಜಲ ಸಂಪನ್ಮೂಲ ಇಲಾಖೆಯಲ್ಲಿ 20 ಸಾವಿರ ಕೋಟಿ ರೂ ಭ್ರಷ್ಟಾಚಾರ!?

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 20 ಸಾವಿರ ಕೋಟಿ ರೂಗಳ ಅವ್ಯವಹಾರ ನಡೆದಿದೆಎಂದು ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ. ಅವರ ಆರೋಪವನ್ನು ಸರ್ಕಾರ ನಿರಾಕರಿಸಿದೆ.

ವಿಶ್ವನಾಥ್‌ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಲಕ್ಷ್ಮಣ್ ರಾವ್ ಪೇಶ್ವೆ, ರಾಜ್ಯದ ಜಲಸಂಪನ್ಮೂಲ ಇಲಾಖೆಯಲ್ಲಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದೆ. ಯಾವುದೇ ಅಕ್ರಮಗಳೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ಯೋಜನೆಗಳಿಗೆ ಆರ್ಥಿಕ ಇಲಾಖೆ ಸಹಮತಿ ಹಾಗೂ ಸಮ್ಮತಿ ಇಲ್ಲದೆಯೇ 20 ಸಾವಿರ ಕೋಟಿ ರೂ ಟೆಂಡರ್ ಆಹ್ವಾನಿಸಲಾಗಿದೆ ಎಂಬ ಆರೋಪ ಸುಳ್ಳು. ಯೋಜನೆಗೆ ಸಂಬಂಧಿಸಿದಂತೆ ರೂ.21,473.67 ಕೋಟಿ ಮೊತ್ತದ ಸಮಗ್ರ ಪರಿಷ್ಕೃತ ಯೋಜನಾ ವರದಿಯ ಶಿಫಾರಸ್ಸಿನ ಅನ್ವಯ ಸರ್ಕಾರವು ದಿನಾಂಕ ಕಳೆದ 2020ರ ಡಿ.16 ರಂದು ಆರ್ಥಿಕ ಇಲಾಖೆ ಸಹಮತಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬಳಿಕ ಡಿ.24 ರಂದು ನಡೆದ ಕೇಂದ್ರ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಈ ಯೋಜನೆಗೆ 16,125.48 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಸ್ತಾಪನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಕಳೆದ ಮಾ.25ರ ಸಭೆಯಲ್ಲಿ ಈ ಕಡತವನ್ನು ಕೇಂದ್ರದ ಹೂಡಿಕೆ ತೀರುವಳಿ ಮಂಡಳಿಗೆ ನೀಡಲಾಗಿದೆ. ಪ್ರಸ್ತುತ ಉನ್ನತಾಧಿಕಾರ ಸಮಿತಿಯ ಮುಂದೆ ತಿರುವಳಿಗಾಗಿ ಪ್ರಸ್ತಾಪವನೆ ಸಲ್ಲಿಕೆ ಹಂತದಲ್ಲಿ ಇದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಜೆಗಳ ದುರಾದೃಷ್ಟ: ಪೂರ್ಣಪುಟದ ಜಾಹೀರಾತಿನಲ್ಲಿ ಆದಿತ್ಯನಾಥ್‌ ಮತ್ತು ಯಡಿಯೂರಪ್ಪ ತಮ್ಮ ಬಗ್ಗೆ ತಾವೇ ಹೆಮ್ಮೆ ಪಡುತ್ತಾರೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights