ಅಂತರ್‌ಜಾತಿ ಪ್ರೀತಿ: ಮಗಳನ್ನೇ ಕೊಲೆ ಮಾಡಿದ ತಂದೆ!

ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ ಹೆತ್ತ ಮಗಳನ್ನೇ ತಂದೆ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.

19 ವರ್ಷದ ಯುವತಿ ಗಾಯತ್ರಿ ಕೊಲೆಯಾದ ಯುವತಿ ಎಂದು ತಿಳಿದು ಬಂದಿದೆ. ಆಕೆಯ ತಂದೆ ಜಯರಾಮ್‌ ತನ್ನ ಮಗಳನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಯುಸಿ ಓದುತ್ತಿದ್ದ ಗಾಯತ್ರಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ಮನೆಯಲ್ಲಿಯೇ ಇದ್ದಳು. ಆಕೆ ತನ್ನದೇ ಗ್ರಾಮದಲ್ಲಿದ್ದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ಬಗ್ಗೆ ಯುವತಿಯ ಕುಟುಂಬಸ್ಥರು ತಿಳಿದುಕೊಂಡು, ಯುವತಿಗೆ ಆತನಿಂದ ದೂರ ಇರುವಂತೆ ಎಚ್ಚರಿಕೆ ನೀಡಿದ್ದರು. ಆದರೂ, ಆಕೆ ತನ್ನ ಪ್ರೇಮಿಯೊಂದಿಗೆ ಒಡನಾಟ ಮುಂದುವರೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಅಪ್ಪನಿಗಾಗಿ ಊಟ ತೆಗೆದುಕೊಂಡ ಗಾಯತ್ರಿ ಹೋಗಿದ್ದಾಳೆ. ಈ ಸಂದರ್ಭದಲ್ಲಿ ಅವಳ ಪ್ರೀತಿಯ ವಿಷಯ ಪ್ರಸ್ತಾಪವಾಗಿದೆ. ನಾನು ಯಾವುದೇ ಕಾರಣಕ್ಕೂ ಯುವಕನನ್ನು ಬಿಡುವುದಿಲ್ಲ ಎಂದು ಹಠ ಮಾಡಿದ್ದಾಳೆ. ಕೋಪಗೊಂಡ ಜಯರಾಮ್​(ತಂದೆ) ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಾಡಿದ ತಪ್ಪಿಗೆ ಪ್ರಾಯಶ್ಚಿತವವಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ: ಜಲ ಸಂಪನ್ಮೂಲ ಇಲಾಖೆಯಲ್ಲಿ 20 ಸಾವಿರ ಕೋಟಿ ರೂ ಭ್ರಷ್ಟಾಚಾರ!?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights