ಕೊರೊನಾ ನೆಗೆಟಿಕ್‌ ವರದಿ ಬಂದರೂ ಶಾಸಕ ಸಾವು: ವೈದ್ಯರು ಹೇಳಿದ್ದೇನು?

ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದ ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ ಜಯಂತ್‌ ನಾಸ್ಕರ್‌ ಅವರು ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಗುಣಮುಖರಾಗಿದ್ದ ನಂತರದಲ್ಲಿ ಅವರಿಗೆ ಕೋವಿಡ್‌ ನೆಗೆಟಿವ್‌ ವರದಿ ಬಂದಿತ್ತು. ಆದರೂ ಅವರು ಸಾವನ್ನಪ್ಪಿದ್ದು, ಅದಕ್ಕೆ ಅವರು ಧೀರ್ಘಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದದ್ದು ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಟಿಎಂಸಿಯಿಂದ ಮೂರು ಬಾರಿ ಶಾಸಕರಾಗಿದ್ದ ಜಯಂತ್‌ ನಾಸ್ಕರ್‌ ಅವರು ಗೋಸಾಬಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಬಳಿಕ ಕೋವಿಡ್‌ನಿಂದ ಅವರು ಗುಣಮುಖರಾಗಿದ್ದಾರೆ. ಅವರಿಗೆ ಕೊರೊನಾ ನೆಗೆಟಿವ್‌ ವರದಿ ಬಂದಿದೆ ಎಂದು ಹೇಳಲಾಗಿತ್ತು.

ಆದರೆ, ಆಸ್ಪತ್ರೆಯಿಂದ ಮನೆಗೆ ತೆರಳಿದ ಕೆಲವೇ ದಿನಗಳಲ್ಲಿ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಎಂಆರ್ ಬಂಗೂರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಖಾಸಗಿ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಆಸ್ಪತ್ರೆಯಲ್ಲಿಯೇ ಅವರು ಮೃತಪಟ್ಟಿದ್ದಾರೆ.

ಶಾಸಕರಿಗೆ ನೆಗೆಟಿವ್‌ ವರದಿ ಬಂದದ್ದು ನಿಜ. ಆದರೆ ಅವರು ಆದರೆ ದೀರ್ಘಕಾಲದ ಅನಾರೋಗ್ಯಕ್ಕೆ ಒಳಗಾಗಿದ್ದು. ಈ ಹಿನ್ನೆಲೆಯಲ್ಲಿ ಶ್ವಾಸಕೋಶ ಹಾನಿಗೊಳಗಾಗಿತ್ತು. ಇದೇ ಕಾರಣಕ್ಕೆ ಅವರು ಮೃತಪಟ್ಟಿದ್ದಾರೆ ಎಂದು ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ರಾಜ್ಯಪಾಲರಾಗಿ ಯಡಿಯೂರಪ್ಪ? ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಖಚಿತ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights