ಬಿಎಸ್‌ವೈಗೆ ಸಿಕ್ಕಿದ್ದು ಅಲ್ಪವಿರಾಮ; ನಾಯಕತ್ವ ಬದಲಾವಣೆ ಕಟ್ಟಿಟ್ಟ ಬುತ್ತಿ: ಬಿಜೆಪಿ ಸುಳಿವು

ರಾಜ್ಯ ಬಿಜೆಪಿಯಲ್ಲಿನ ನಾಯಕತ್ವದ ಸಮಸ್ಯೆಯನ್ನು ಸದ್ಯಕ್ಕೆ ನಿವಾರಿಸಲಾಗಿದೆ. ಆದರೂ, ಅದು ಅಷ್ಟೆಕ್ಕೆ ಮುಗಿಯುವುದಿಲ್ಲ ಎಂಬುದನ್ನು ರಾಜ್ಯ ನಾಯಕರ ಮಾತುಗಳು ಸೂಚಿಸುತ್ತಿವೆ. ಪ್ರಸ್ತುತ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿದ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸ್ವಲ್ಪ ವಿರಾಮ ಸಿಕ್ಕಿದೆ. ಆದರೆ, ಇದು ಅಲ್ಪವಿರಾಮ ಇರಬಹುದು. ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬುದರ ಬಗ್ಗೆ ಪಕ್ಷದ ನಾಯಕರು ಸುಳಿವು ನೀಡಿದ್ದಾರೆ.

ಇದಕ್ಕಾಗಿ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಾಯಕರ ಒಂದು ಗುಂಪು ತಯಾರಿ ನಡೆಸುತ್ತಿದೆ. ನಿನ್ನೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ್ದಾರೆ. ಅಲ್ಲದೆ, ದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ರಾಜ್ಯ ಸಚಿವರೊಬ್ಬರು ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ -19 ರ ಮೂರನೇ ಅಲೆಯು ಭೀಕರತೆಯನ್ನು ಸೃಷ್ಟಿಸುವ ಸಾಧ್ಯತೆ ಇದೆ. ಹೀಗಾಗಿ, ಮುಂದಿನ ಮೂರು ತಿಂಗಳಾದರೂ ಯಾವುದೇ ಬದಲಾವಣೆಗಳಿಲ್ಲ ಎಂದು ಯಡಿಯೂರಪ್ಪ ಅವರ ಸಂಪುಟದಲ್ಲಿರುವ ಹಿರಿಯ ಮಂತ್ರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ರಾಜ್ಯಪಾಲರಾಗಿ ಯಡಿಯೂರಪ್ಪ? ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಖಚಿತ?

“ನಾಯಕತ್ವ ಬದಲಾವಣೆಗೆ ಇದು ಸರಿಯಾದ ಸಮಯವಲ್ಲ, ಆದರೆ ನಂತರ ಮಾಡಬಹುದು. ಯಡಿಯೂರಪ್ಪ ಅವರನ್ನು ಪಕ್ಷದ ಉನ್ನತ ಅಧಿಕಾರಿಗಳಿಂದ ದೆಹಲಿಗೆ ಕರೆಸಲಾಗುತ್ತದೆ. 2023 ರಲ್ಲಿ ರಾಜ್ಯವು ಚುನಾವಣೆಗೆ ಹೋಗುವ ಮೊದಲು ನಾಯಕತ್ವ ಬದಲಾವಣೆ ಅಗತ್ಯವಿದೆ” ಎಂದು ಹೈಕಮಾಂಡ್‌ಗೆ ಸ್ಪಷ್ಟವಾಗಿದೆ” ಎಂದು ದೆಹಲಿ ಮೂಲದ ನಾಯಕರೊಬ್ಬರು ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆಯ ಪರಿಗಣನೆಯಲ್ಲಿ ಕೆಲವು ಹೆಸರುಗಳಿವೆ. ಆ ಪೈಕಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಡಿ ವಿ ಸದಾನಂದ ಗೌಡ ಸೇರಿದಂತೆ ಹಲವರ ಹೆಸರುಗಳು ರೇಸ್‌ನಲ್ಲಿವೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ದೆಹಲಿಯ ನಾಯಕತ್ವವು ಕ್ಯಾಚ್ 22-ಪರಿಸ್ಥಿತಿಯಲ್ಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಲಿಂಗಾಯತ ಮತಗಳನ್ನು ಕಳೆದುಕೊಳ್ಳದೆ ಯಡಿಯೂರಪ್ಪ ಅವರನ್ನು ಸುಗಮವಾಗಿ ಸಿಎಂ ಹುದ್ದೆಯಿಂದ ಕೆಳಗಿಳಿಸಲು ಯತ್ನಿಸಲಾಗುತ್ತಿದೆ. ಅದಕ್ಕಾಗಿ ಅವರಿಗೆ ಉತ್ತಮ ಹುದ್ದೆಯನ್ನು ನೀಡಬಹುದು ಎಂದು ತಿಳಿದು ಬಂದಿದೆ.

ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಮುಖಂಡರಿಗೆ ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುವುದರ ವಿರುದ್ಧ ಎಚ್ಚರಿಕೆ ನೀಡಿದ್ದರು ಮತ್ತು ಈ ಬಗ್ಗೆ ಉನ್ನತ ಸಮಿತಿ ಸಭೆಯಲ್ಲಿಯೂ ಚರ್ಚಿಸಲಾಯಿತು. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಪಕ್ಷದ ನಾಯಕರ ಒಂದು ಗುಂಪು ಒತ್ತಾಯಿಸಿದೆ.

ಇದನ್ನೂ ಓದಿ: ಪ್ರಜೆಗಳ ದುರಾದೃಷ್ಟ: ಪೂರ್ಣಪುಟದ ಜಾಹೀರಾತಿನಲ್ಲಿ ಆದಿತ್ಯನಾಥ್‌ ಮತ್ತು ಯಡಿಯೂರಪ್ಪ ತಮ್ಮ ಬಗ್ಗೆ ತಾವೇ ಹೆಮ್ಮೆ ಪಡುತ್ತಾರೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights