ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂಟರ್ನೆಟ್ ಬಂದ್ ಆಗುವ ಸಾಧ್ಯತೆ: ಅಧ್ಯಯನ ವರದಿ

ಬಿಜೆಪಿಯೇತರ ಆಡಳಿತದ ರಾಜ್ಯಗಳಿಗಿಂತ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಇಂಟರ್ನೆಟ್ ಬಂದ್ ಮಾಡುವ ಸಾಧ್ಯತೆಗಳು ಶೇ.250ರಷ್ಟು ಹೆಚ್ಚಾಗಿದೆ ಎಂದು ಆಮ್‍ಸ್ಟೆರ್ಡಾಂ ವಿವಿಯ ಕ್ರಿಸ್ ರುಯಿಗ್ರೊಕ್ ಅವರು ನಡೆಸಿದ ವಿಶ್ಲೇಷಣೆಯಿಂದ ತಿಳಿದು ಬಂದಿದೆ.

2012ರಿಂದ ಇತ್ತೀಚೆಗಿನ ದತ್ತಾಂಶ ಸಂಗ್ರಹಿಸಲಾಗಿದೆ. ದತ್ತಾಂಶಗಳ ಪ್ರಕಾರ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ,ಬಿಜೆಪಿಯೇತರ ರಾಜ್ಯಗಳಲ್ಲಿ ಸಮಯ ಕಳೆದಂತೆ ಇಂಟರ್ನೆಟ್‌ ನಿರ್ಬಂಧಿಸುವ ಸಾಧ್ಯತೆಗಳು ಹೆಚ್ಚುತ್ತಿವೆ ಎಂದು ವಿಶ್ಲೇಷಿಸಲಾಗಿದೆ.

ಯಾವುದೇ ಒಂದು ತಿಂಗಳಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಅಂತರ್ಜಾಲ ಸ್ಥಗಿತ ಸಾಧ್ಯತೆ ಶೇ.3ರಷ್ಟಿದ್ದರೆ ಬಿಜೆಪಿಯೇತರ ರಾಜ್ಯಗಳಲ್ಲಿ ಈ ಸಾಧ್ಯತೆ ಶೇ0.8ರಷ್ಟಿದೆ ಎಂದು ಅಧ್ಯಯನದಿಂದ ತಿಳಿದು ಬಂದಿದೆ.

ಈ ಅಧ್ಯಯನದಲ್ಲಿ ಜಮ್ಮು ಕಾಶ್ಮೀರವನ್ನು ಒಳಗೊಂಡಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತದಲ್ಲಿ 2020ರಲ್ಲಿ 115 ಬಾರಿ ಇಂಟರ್ನೆಟ್ ಸ್ಥಗಿತ ನಡೆಸಲಾಗಿದ್ದು ಇದು ಜಗತ್ತಿನ ಇತರ ದೇಶಗಳಿಗೆ ಹೋಲಿಸಿದಾಗ ಗರಿಷ್ಠ ಸಂಖ್ಯೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಯೆಮೆನ್‍ನಲ್ಲಿ ಕೇವಲ 5 ಬಾರಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ಯೋಗ ದಿನ 88 ಲಕ್ಷ ಡೋಸ್‌, ಮಂಗಳವಾರ 54 ಲಕ್ಷ -ಭಾನುವಾರ 69 ಸಾವಿರ; ಇದು ಮೋದಿ ಸರ್ಕಾರ ಬೂಟಾಟಿಕೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights