2ನೇ ಅಲೆ ಇಳಿಯುತ್ತಲೇ ಮತ್ತೊಂದು ಶಾಕಿಂಗ್ ನ್ಯೂಸ್; 40 ಜನರಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪತ್ತೆ!
ಭಾರತದಲ್ಲಿ ಕೊರೊನಾ ಎರಡನೇ ಅಲೆ ಇಳಿಯುತ್ತಿದೆ. 3ನೇ ಅಲೆಯ ಆತಂಕ ದೇಶದ ಎದುರಿಗಿದೆ. ಈ ಹೊತ್ತಲ್ಲೇ, ದೇಶದ ಜನರಿಗೆ ಮತ್ತೊಂದು ಆಘಾತ ಎದುರಾಗಿದ್ದು, ದೇಶದಲ್ಲಿ ಇದೂವರೆಗೆ 40 ಜನರಲ್ಲಿ ರೂಪಾಂತರಿ ಡೆಲ್ಟಾ ಪ್ಲಸ್ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶದಲ್ಲಿ 40ಕ್ಕೂ ಹೆಚ್ಚು ‘ವೇರಿಯಂಟ್ ಡೆಲ್ಟಾ ಪ್ಲಸ್’ ಪ್ರಕರಣಗಳು ಪತ್ತೆಯಾಗಿವೆ. ಆದರೆ, ಈ ರೂಪಾಂತರಿ ವೈರಸ್ ಕೇವಲ ಕೇರಳ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ, ಇತರ ರಾಜ್ಯಗಳಲ್ಲೂ ಅವು ಪತ್ತೆಯಾಗಿವೆ ಎಂದು ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳ ಬಗ್ಗೆ ಅಧಿಕೃತ ಹೇಳಿಕೆಯಲ್ಲಿ, ಡೆಲ್ಟಾ ಪ್ಲಸ್ ಕೇವಲ ‘ಆಸಕ್ತಿಯ ರೂಪಾಂತರ’ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಮಹಾರಾಷ್ಟ್ರದಲ್ಲಿ 21, ಮಧ್ಯಪ್ರದೇಶದಲ್ಲಿ ಮೂರು ಮತ್ತು ಕೇರಳದಲ್ಲಿ ಆರು ಪ್ರಕರಣಗಳು ವರದಿಯಾಗಿವೆ.
ಇದನ್ನೂ ಓದಿ: ಮಹಾರಾಷ್ಟ್ರ: ಸೇನಾ ಮತ್ತು ಕಾಂಗ್ರೆಸ್ ನಡುವಿನ ಬಿರುಕು ಏನನ್ನು ಸೂಚಿಸುತ್ತಿದೆ?