ಆಂಧ್ರ ಸಿಎಂ ಜಗನ್‌ ಮೋಹನ್‌ ರೆಡ್ಡಿ ವಿರುದ್ದ 11 ಕೇಸ್‌ ದಾಖಲಿಸಿದ ಹೈಕೋರ್ಟ್‌!

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧ 11 ಸುಮೊಟು ಪ್ರಕರಣಗಳನ್ನು ಆಂಧ್ರ ಪ್ರದೇಶ ಹೈಕೋರ್ಟ್ ದಾಖಲಿಸಿದೆ.

2016 ರಲ್ಲಿ ಜಗನ್‌ ರೆಡ್ಡಿಅವರು ವಿರೋಧ ಪಕ್ಷದಲ್ಲಿದ್ದಾಗ ಅಂದಿನ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವಿರುದ್ಧ ಅಮರಾವತಿ ಭೂಮಿ ಅಕ್ರಮದ ಆರೋಪ ಮಾಡಿದ್ದರು. ಅಲ್ಲದೆ, ನ್ಯಾಯಾಲಯದ ಬಗ್ಗೆಯೂ ಹಲವು ಹೇಳಿಕೆಗಳನ್ನು ನೀಡಿದ್ದರು.

ಅವರ ಹೇಳಿಕೆಗಳನ್ನು ಆಧರಿಸಿ ಅನಂತಪುರ ಮತ್ತು ಗುಂಟೂರು ಜಿಲ್ಲೆಯಲ್ಲಿ ಕೆಲವು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಗಳ ಪರಿಶೀಲನೆ ನಡೆಸಿರುವ ಪೊಲೀಸರು, ಕ್ರಿಯಾಶೀಲ ಸಾಕ್ಷ್ಯಗಳ ಅನುಪಸ್ಥಿತಿಯಲ್ಲಿ ಅಂತಿಮ ವರದಿಗಳನ್ನು ಸಲ್ಲಿಸಿದ್ದಾರೆ.

ವರದಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿರುವ ಆಂಧ್ರ ಹೈಕೋರ್ಟ್‌ನ ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾ ಅವರು, ಹೈಕೋರ್ಟ್ ಆಡಳಿತಾತ್ಮಕ ಸಮಿತಿ ಶಿಫಾರಸ್ಸಿನಂತೆ ಸುಮೊಟು ಕೇಸ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಪೊಲೀಸರಿಗೆ ನೋಟಿಸ್ ನೀಡುವುದನ್ನು ತಡೆದಿದ್ದಾರೆ.

ಪ್ರಕರಣಗಳನ್ನು ರದ್ದುಗೊಳಿಸಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಅರ್ಜಿದಾರರು ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಕೆಳ ನ್ಯಾಯಾಲಯಗಳು ಪ್ರಕರಣಗಳನ್ನು ರದ್ದುಗೊಳಿಸಿದ್ದವು.

ಆದರೆ, ನ್ಯಾಯಾಲಯದ ಆಡಳಿತ ಸಮಿತಿಯು ಅದರಲ್ಲಿ ದೋಷವನ್ನು ಕಂಡುಹಿಡಿದಿದ್ದು ಆಡಳಿತಾತ್ಮಕ ನಿರ್ಧಾರವನ್ನು ತೆಗೆದುಕೊಂಡಿತು.

ಸಿಆರ್ ಪಿಸಿ ಸೆಕ್ಷನ್ 397, 401, 482 ಮತ್ತು 483 ರ ಅಡಿಯಲ್ಲಿ ಹೈಕೋರ್ಟ್ ತನ್ನ ಅಧಿಕಾರವನ್ನು ಬಳಸಿಕೊಂಡು ಸುಮಟು ಕೇಸ್ ದಾಖಲಿಸಲು ಸಾಧ್ಯವಿಲ್ಲ. ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಆಡಳಿತಾತ್ಮಕ ನಿರ್ಧಾರವನ್ನು ಆಧರಿಸಿ ಸುಮೊಟು ಕೇಸ್ ದಾಖಲಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಶ್ರೀರಾಮ್ ವಾದಿಸಿದ್ದಾರೆ.

ಇದನ್ನೂ ಓದಿ: ಎಮ್ಮೆ ಖರೀದಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಥಳಿಸಿ ಹತ್ಯೆಗೈದ ಗುಂಪು; ಗೋರಕ್ಷಕರಿಂದ ಕೃತ್ಯ ಎಂದು ಸ್ಥಳೀಯರ ಆರೋಪ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights