ರಾಜ್ಯದಲ್ಲಿ ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ; ಬಿಜೆಪಿ ಭಾರೀ ಸಿದ್ದತೆ!

ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದಂತೆಯೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ದೇಶದಲ್ಲಿ 3ನೇ ಅಲೆಯ ಆತಂಕ ಎದುರಾಗುತ್ತಿದೆ, ಸರ್ಕಾರಗಳು ಕೊರೊನಾ ಎದುರಿಸಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಆದರೆ, ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ, ಕೊರೊನಾ ನಿಯಂತ್ರಣಕ್ಕಿಂತ ನಾಯಕತ್ವ ಬದಲಾವಣೆ, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಗಳ ಸಿದ್ದತೆ ಭಾರೀ ಒತ್ತುಕೊಡುತ್ತಿದೆ ಎಂದು ತಿಳಿದು ಬಂದಿದೆ.

ಕೊರೊನಾ 3ನೇ ಅಲೆ ಅಬ್ಬರ ಹೆಚ್ಚಾದರೆ, ಅದು ನಿಯಂತ್ರಣಕ್ಕೆ ಬಂದ ನಂತರ, 2022ರ ಆರಂಭದಲ್ಲಿ ಈ ಸ್ಥಳೀಯ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ. ಹೀಗಾಗಿ, ಕಳೆದ ಎರಡು ದಿನಗಳ ಹಿಂದೆ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ್ದ ಸಿಎಂ ಬಿಎಸ್‌ವೈ, ಬಿಜೆಪಿ ಮುಖಂಡರು ಮುಂದಿನ ಚುನಾವಣೆಗಳಿಗೆ ಸಿದ್ದರಾಗಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: ರಾಜ್ಯ BJPಯಲ್ಲಿ ನಾಯಕತ್ವ ಬದಲಾವಣೆ ಫಿಕ್ಸ್‌!; ಬಿಎಸ್‌ವೈ ಮುಂದಿವೆ ಎರಡು ಆಯ್ಕೆಗಳು!?

ಈ ಸ್ಥಳೀಯ ಚುನಾವಣೆಗಳ ಫಲಿತಾಂಶವು 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ನೆರವಾಗಲಿದ್ದು, ಸ್ಥಳೀಯ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ಹೇಳಿದೆ.

ಜುಲೈ 1 ರಿಂದ 15 ರವರೆಗೆ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಗಳನ್ನು ನಡೆಸಲು ನಿರ್ಧರಿಸಿದ್ದಾಗಿಯೂ ಜುಲೈ 16 ರಿಂದ 30 ರವರೆಗೆ ಎಲ್ಲಾ ಮಂಡಳಿಗಳಲ್ಲಿ ಸಭೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಅವರು ಹೇಳಿದ್ದಾರೆ.

ಪಕ್ಷವು ಬೂತ್ ಅಧ್ಯಕ್ಷರಿಗೆ ನೇಮ್‌ಪ್ಲೇಟ್‌ಗಳನ್ನು ನೀಡಲಿದ್ದು, ಆಗಸ್ಟ್‌ನಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಮಾವೇಶವನ್ನು ನಡೆಸಲಿದೆ. ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ರಾಜ್ಯಮಟ್ಟದ ಸಮಾವೇಶವನ್ನು ನಡೆಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮೋದಿ ನೇತೃತ್ವದ ಸಂಪುಟ ಪುನರ್‌ರಚನೆ; ಕರ್ನಾಟಕದಿಂದ ಯಾರಿಗೆ ಅವಕಾಶ? ಡೀಟೇಲ್ಸ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights