ಸಿಎಂ ಬದಲಾವಣೆಯ ಬಗ್ಗೆ ಬಿಜೆಪಿ ಹೈಕಮಾಂಡ್‌ ತೀರ್ಪಿಗಾಗಿ ಕಾಯುತ್ತಿದ್ದೇನೆ: ಸಚಿವ ಯೋಗೇಶ್ವರ್

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಾಳಗ ಇನ್ನೂ ಮುಗಿದಿಲ್ಲ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ರಾಜ್ಯ ಭೇಟಿ ನೀಡಿ, ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಎಳೆದಿದ್ದಾರೆ ಎನ್ನಲಾಗಿತ್ತು. ಆದರೆ, ಈಗಲೂ ಹಲವಾರು ಸಚಿವರು ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ಈ ವಿಚಾರವಾಗಿ ನಮಗೆ ಒಳ್ಳೆಯ ಸಂದೇಶವನ್ನು ಬಿಜೆಪಿ ನಾಯಕರು ನೀಡುತ್ತಾರೆ ಎಂದು ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಮ್ಮ ಪಕ್ಷದ ನಾಯಕರು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ನಮಗೆ ಮಾರ್ಗಸೂಚಿಗಳನ್ನು ನೀಡುತ್ತಿರುವಂತೆಯೇ, ನಾಯಕತ್ವದ ಸಮಸ್ಯೆಯನ್ನು ಪರಿಹರಿಸಲು ನಮಗೆ ಮಾರ್ಗಸೂಚಿಗಳನ್ನು ನೀಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಯೋಗೇಶ್ವರ ಅವರು ಯಡಿಯೂರಪ್ಪ ವಿರೋಧಿ ಬಣದ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಗಬೇಕು ಎಂದು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತಲೇ ಇದ್ದಾರೆ.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರ ಪರವಾಗಿ ಮತ್ತು ವಿರೋಧವಾಗಿ ಎಲ್ಲಾ ರೀತಿಯ ವಾದಗಳನ್ನು ಮಾಡಲಾಗಿದೆ ಮತ್ತು ಈ ವಿಷಯದ ಬಗ್ಗೆ ಹೈಕಮಾಂಡ್‌ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ಸಿನಲ್ಲೂ ನಾಯಕತ್ವದ ಚರ್ಚೆ ಹುಟ್ಟಿಕೊಂಡಿದೆ. “ಏಳು ದಶಕಗಳಿಂದ ಕಾಂಗ್ರೆಸ್ ಪರ ಒಲವು ಹೊಂದಿದ್ದ ದಲಿತರು (ಕಾಂಗ್ರೆಸ್ ರಾಜ್ಯದ ಸಿಎಂ ಆಗಲು ದಲಿತರನ್ನು ಆಯ್ಕೆ ಮಾಡದ ಕಾರಣ) ವಂಚಿತರಾಗಿದ್ದಾರೆ. ದಲಿತ ಮುಖ್ಯಮಂತ್ರಿಯ ಬೇಡಿಕೆ ಹೆಚ್ಚಾಗುತ್ತಿದೆ” ಎಂದು ಯೋಗೇಶ್ವರ್ ತಿಳಿಸಿದ್ದಾರೆ.

“ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಬೇಕೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರಿಗೆ ಆ ಪಕ್ಷದ ಶಾಸಕರಿಂದ ಸಾಕಷ್ಟು ಬೆಂಬಲವಿದೆ ಎಂದು ಕಾಣುತ್ತಿಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಸಕ್ರಿಯರಾಗಿರುವವರೆಗೂ ಅವರು ಮುಖ್ಯಮಂತ್ರಿಯಾಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಎರಡು ವರ್ಷಗಳ ನಂತರ ಏನಾಗುತ್ತದೆ ಎಂದು ನೋಡೋಣ. 2023 ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಏನಾಗಲಿದೆ ಎಂಬುದರ ನಂತರ ಉಳಿದ ವಿಚಾರಳು” ಎಂದು ಯೋಗೇಶ್ವರ ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ 40,845 ಜನರಿಗೆ ಬ್ಲಾಕ್‌ ಫಂಗಸ್‌; ತುತ್ತಾದವರಲ್ಲಿ ಶೇ.85 ರಷ್ಟು ಕೊರೊನಾ ರೋಗಿಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights