ಜುಲೈ 31 ರವರೆಗೆ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ’ ಯೋಜನೆ ಜಾರಿಗೆ ತರಲು ಸುಪ್ರೀಂ ಆದೇಶ!

ಜುಲೈ 31 ರವರೆಗೆ “ಒಂದು ರಾಷ್ಟ್ರ, ಒಂದು ಪಡಿತರ ಚೀಟಿ” ಯೋಜನೆಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅಲ್ಲದೆ, ಕೊರೊನಾ ಬಿಕ್ಕಟ್ಟು ಇರುವವರೆಗೂ ವಲಸೆ ಕಾರ್ಮಿಕರಿಗೆ ಉಚಿತ ವಿತರಣೆಗಾಗಿ ಕೇಂದ್ರವು ಪಡಿತರವನ್ನು ಪೂರೈಸಬೇಕು ಎಂದೂ ಸುಪ್ರೀಂ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್. ಷಾ ಅವರ ನ್ಯಾಯಪೀಠವು, ಕೊರೊನಾ 2ನೇ ಅಲೆಯ ಕಾರಣದಿಂದಗಿ ದೇಶದ ವಿವಿಧ ಭಾಗಗಳಲ್ಲಿ ಕರ್ಫ್ಯೂ ಮತ್ತು ಲಾಕ್‌ಡೌನ್‌ ಜಾರಿಯಲ್ಲಿದೆ. ಹೀಗಾಗಿ ಅಸಂಘಟಿತ ವಲಯದ ನೌಕರರಿಗೆ ಕಲ್ಯಾಣ ಯೋಜನೆಗಳನ್ನು ನೀಡಿಲು ಅವರ ನೊಂದಣಿಗಾಗಿ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) ಮೂಲಕ ವೆಬ್‌ಸೈಟ್‌ಅನ್ನು ರಚಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ.

ಆಯಾ ರಾಜ್ಯಗಳಲ್ಲಿ ಸಾಂಕ್ರಾಮಿಕ ಪರಿಸ್ಥಿತಿ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೂ ವಲಸೆ ಕಾರ್ಮಿಕರಿಗಾಗಿ ಸಮುದಾಯ ಅಡಿಗೆಮನೆಗಳನ್ನು ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ನಿರ್ದೇಶನ ನೀಡಿದೆ.

ಸಾಂಕ್ರಾಮಿಕ ಪರಿಸ್ಥಿತಿ ಇರುವವರೆಗೂ ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯ ಒದಗಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಬೇಕು ಎಂದು ಕೇಂದ್ರವನ್ನು ಅದು ಕೇಳಿದೆ.

ಸಾಮಾಜಿಕ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್, ಹರ್ಷ್ ಮಂದರ್ ಮತ್ತು ಜಗದೀಪ್ ಛೋಕರ್ ಅವರು ವಲಸೆ ಕಾರ್ಮಿಕರ ಕಲ್ಯಾಣ ಕ್ರಮಗಳನ್ನು ಜಾರಿಗೆ ತರಬೇಕೆಂದು ಸುಪ್ರೀಂನಲ್ಲಿ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಭಾರತದಲ್ಲಿ 40,845 ಜನರಿಗೆ ಬ್ಲಾಕ್‌ ಫಂಗಸ್‌; ತುತ್ತಾದವರಲ್ಲಿ ಶೇ.85 ರಷ್ಟು ಕೊರೊನಾ ರೋಗಿಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights