ಪಂಜಾಬ್‌ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪ್ರಿಯಾಂಕ ಗಾಂಧಿಯನ್ನು ಭೇಟಿ ಮಾಡಿದ ನವಜೋತ್ ಸಿಧು!

2022ರಲ್ಲಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ, ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೀಗಾಗಿ ಚುನಾವಣೆಗೂ ಮುನ್ನ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌ ಯತ್ನಿಸುತ್ತಿದೆ. ಈ ಮಧ್ಯೆ, ಬಂಡಾಯ ನಾಯಕ ನವಜೋತ್ ಸಿಂಗ್ ಸಿಧು ಅವರು ಪ್ರಿಯಾಂಕ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಸಿಧು ಅವರೊಂದಿಗೆ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ ಕೆಲವೇ ಗಂಟೆಗಳ ನಂತರ ಸಿಧು ಅವರು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ, ಮೂರು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.

“ಪ್ರಿಯಾಂಕಾ ಗಾಂಧಿಯವರೊಂದಿಗೆ ಸುದೀರ್ಘ ಸಭೆ ನಡೆಸಿದ್ದೇನೆ” ಎಂಬ ಶೀರ್ಷಿಕೆಯೊಂದಿಗೆ ಫೋಟೋವೊಂದನ್ನು ಸಿಧು ಟ್ವೀಟ್ ಮಾಡಿದ್ದಾರೆ.

ಪಂಜಾಬ್‌ನ ಮಾಜಿ ಸಚಿವರಾದ ಸಿಧು ಅವರು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಅಲ್ಲದೆ, ಅವರ ವಿರುದ್ದ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಹೊರಗಿಟ್ಟು NCP ನೇತೃತ್ವದಲ್ಲಿ 8 ಪಕ್ಷಗಳ ಸಭೆ; ಸಜ್ಜಾಗುತ್ತಿದೆಯೇ ತೃತೀಯ ರಂಗ!

ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಪಕ್ಷದ ಪಂಜಾಬ್ ಘಟಕದಲ್ಲಿ ಭಿನ್ನಾಭಿಪ್ರಾಯಗಳನ್ನು ತೊಡೆದು ಹಾಕಿ, ಒಗ್ಗಟ್ಟಿನ ಒಂದು ಮುಖವನ್ನು ಪ್ರದರ್ಶಿಸಲು ಕಾಂಗ್ರೆಸ್ ನಾಯಕತ್ವ ಪ್ರಯತ್ನಿಸುತ್ತಿದೆ.

2022 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪರಿಸ್ಥಿತಿ ಮತ್ತು ಪಕ್ಷವನ್ನು ಬಲಪಡಿಸಲು ಬೇಕಾದ ಕ್ರಮಗಳ ಬಗ್ಗೆ ರಾಹುಲ್ ಗಾಂಧಿ ಪಂಜಾಬ್‌ನ ಪಕ್ಷದ ಮುಖಂಡರನ್ನು ಭೇಟಿ ಮಾಡಿ ಚರ್ಚಿಸುತ್ತಿದ್ದಾರೆ.

https://twitter.com/sherryontopp/status/1410110461442355200?s=20

2019 ರಲ್ಲಿ ಪಂಜಾಬ್ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದ ಸಿಧು, ಮುಖ್ಯಮಂತ್ರಿ ಸಿಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಅಲ್ಲದೆ, 2015ರಲ್ಲಿ ನಡೆದ ಘಟನೆ ಮತ್ತು ಪೊಲೀಸ್‌ ಗುಂಡಿನ ದಾಳಿ ಪ್ರಕರಣದಲ್ಲಿ ನ್ಯಾಯ ವಿಳಂಭವಾಗಿದೆ ಎಂದು ಸರ್ಕಾರದ ವಿರುದ್ದ ಅಸಮಾಧಾನ ಹೊರಹಾಕಿದ್ದರು.

ಈ ತಿಂಗಳ ಆರಂಭದಲ್ಲ ಪಂಜಾಬ್‌ನ ಪಕ್ಷದೊಳಗಿನ ಭಿನ್ನಾಭಿಪ್ರಯಾವನ್ನು ಬಗೆಹರಿಸಲು ಕಾಂಗ್ರೆಸ್‌ ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಂಜಾಬ್ ವ್ಯವಹಾರಗಳ ಉಸ್ತುವಾರಿ ಹರೀಶ್ ರಾವತ್ ಮತ್ತು ಮಾಜಿ ಸಂಸದ ಜೆ ಪಿ ಅಗರ್ವಾಲ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: 7 ರಾಜ್ಯ ಚುನಾವಣೆ: ಅಷ್ಟೂ ರಾಜ್ಯಗಳಲ್ಲಿಯೂ ಕಾಂಗ್ರೆಸ್‌ ಅಸ್ತವ್ಯಸ್ತ – ಹೈಕಮಾಂಡ್‌ ದಿಗ್ಭ್ರಮೆ!; ಡೀಟೇಲ್ಸ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights