JDS ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್‌ಗೆ ಸೇರುತ್ತಾರೆ?; ಜಿಟಿಡಿ ಹೇಳಿದ್ದೇನು?

ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಮತ್ತೆ ಕಾಂಗ್ರೆಸ್‌ ಮರಳಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಟಿ ದೇವೇಗೌಡ ಅವರು “ಸದ್ಯಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಅಭಿವೃದ್ಧಿಯತ್ತ ಗಮನ ಹರಿಸಿದ್ದೇನೆ. ರಾಜಕೀಯದಲ್ಲಿ ಎಲ್ಲವೂ ಅನಿಶ್ಚಿತ. ಭವಿಷ್ಯ ನುಡಿಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಹಲವು ರೀತಿಯ ಕುತೂಹಲಗಳಿಗೆ ಕಾರಣವಾಗಿದೆ.

ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿದೆ. ಇಡೀ ದೇಶ ಕೊರೊನಾದಿಂದ ತತ್ತರಿಸುತ್ತಿದೆ. ಹಳ್ಳಿಯಿಂದ ದೆಹಲಿಯವರೆಗೆ ಕೊರೊನಾ ಕಾಡುತ್ತಿದೆ. ಸೋಂಕಿನ ನಿಯಂತ್ರಣದ ಬಗ್ಗೆ ನಾವೆಲ್ಲರೂ‌ ಗಮನ ಹರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಕೊರೊನಾದಿಂದಾಗಿ ಅಭಿವೃದ್ದಿ ಕಾರ್ಯಗಳು ನಿಂತು ಹೋಗಿವೆ. ಸರಿಯಾಗಿ ಅನುದಾನವೂ ಇಲ್ಲ. ರಾಜಕಾರಣಿಗಳು ಬಹಳ ಕಷ್ಟದಲ್ಲಿದ್ದೇವೆ. ಶಿಕ್ಷಣದ ಗತಿ ಅಧೋಗತಿಯತ್ತ ಹೋಗುತ್ತಿದೆ. ಆರೋಗ್ಯವೂ ಅಯೋಮಯವಾಗ್ತಿದೆ. ಹೀಗಾಗಿ ನಾನು ಶಾಸಕನಾಗಿ ಕೆಲಸ ಮಾಡ್ತಿದ್ದೇನೆ. ಯಾವುದೇ ಪಕ್ಷದ ಎಂಎಲ್‌ಎ ಎಂದಲ್ಲ ಎಂದು ಅವರು ಹೇಳಿದ್ದಾರೆ.

ರಾಜಕೀಯದಲ್ಲಿ ಎಲ್ಲವೂ ಅನಿಶ್ಚಿತ. ಈಗಲೇ ಏನನ್ನೂ ಹೇಳಲಾಗದು. ಯಾರೂ ಊಹಿಸದ ರೀತಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂತು. ನಿರೀಕ್ಷೆಗೂ ಮೀರಿ ಸರ್ಕಾರ ಭದ್ರಪಡಿಸಿಕೊಂಡಿದ್ದಾರೆ. ಹೀಗೆ ರಾಜಕೀಯದಲ್ಲಿ ಭವಿಷ್ಯ ನುಡಿಯಲಾಗದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಬದಲಾವಣೆಯ ಬಗ್ಗೆ ಬಿಜೆಪಿ ಹೈಕಮಾಂಡ್‌ ತೀರ್ಪಿಗಾಗಿ ಕಾಯುತ್ತಿದ್ದೇನೆ: ಸಚಿವ ಯೋಗೇಶ್ವರ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights