ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರ್ ಅಪಘಾತ..!
ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರ್ ಅಪಘಾತಕ್ಕೊಳಗಾದ ಘಟನೆ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಅಲಗುರ್ಕಿ ಬೈ ಪಾಸ್ ಬಳಿ ಸಂಭವಿಸಿದೆ.
ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ. ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯೂ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಸ್ಥಳದಲ್ಲಿದ್ದ ಸ್ಥಳೀಯರು ಕೂಡಲೇ ಯತಿರಾಜ್ ಅವರನ್ನು ರಕ್ಷಣೆ ಮಾಡಿದ್ದಾರೆ. ಯತಿರಾಜ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಘಟನೆಯಲ್ಲಿ ಜಗ್ಗೇಶ್ ಪುತ್ರ ಯತಿರಾಜ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.
ಹೈದರಾಬಾದ್ ನಿಂದ ಬೆಂಗಳೂರಿಗೆ ಬರುವ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ. ಜಗ್ಗೇಶ್ ಕುಟುಂಬಸ್ಥರು ಅಪಘಾತ ಆಗಿರೋದನ್ನು ಖಚಿತಪಡಿಸಿದ್ದಾರೆ. ಸದ್ಯ ಯತಿರಾಜ್ ಸೇಫ್ ಆಗಿದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿಸಿದ್ದಾರೆ.