ಕೊರೊನಾ ನಿಯಮ ಉಲ್ಲಂಘನೆ: ಕಾಂಗ್ರೆಸ್‌ ಶಾಸಕ ರಂಗನಾಥ್‌ ವಿರುದ್ದ ಎಫ್ಐಆರ್‌!

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಮರಣೋತ್ತರ ಪರೀಕ್ಷಾ ವರದಿ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಪೊಲೀಸ್‌ ಠಾಣೆ ಎದರು ಪ್ರತಿಭಟನೆ ನಡೆಸಿದ್ದ ಕುಣಿಗಲ್‌ ಕ್ಷೇತ್ರದ ಕಾಂಗ್ರೆಸ್‌ ನಾಯಕ ರಂಗನಾಥ್‌ ವಿರುದ್ದ ಪೊಲೀಸರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮರಣೋತ್ತರ ವರದಿ ಇನ್ನೂ ದೊರೆತಿಲ್ಲ ಎಂದು ಶಾಸಕ ರಂಗನಾಥ್‌ ಮತ್ತು ಕೆಲವು ಬೆಂಬಲಿಗರು ಕುಣಿಗಲ್‌ ಪೊಲೀಸ್‌ ಠಾಣೆಯ ಎದುರು ಜೂನ್‌ 19ರಂದು ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಅವರು ಕೊರೊನಾ ಮಾರ್ಗಸೂಚಿಗಳು ಮತ್ತು ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ, ಗ್ರಾಮ ಪಂಚಾಯತಿ ಸದಸ್ಯರ ಜೊತೆ ಉದ್ದಟತನದಿಂದ ವರ್ತಿಸಿದ್ದಾರೆ ಎಂದು ಜೆಡಿಎಸ್‌ ಮುಖಂಡ ಜಗದೀಶ್‌ ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಶಾಸಕ ರಂಗನಾಥ್ ವಿರುದ್ದ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಜೆಡಿಎಸ್‌ ಮುಖಂಡರು ದೂರು ನೀಡುವ ಮುನ್ನವೇ ಪೊಲೀಸರು ರಂಗನಾಥ್‌ ವಿರುದ್ದ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಎನ್‍ಸಿಆರ್ ದಾಖಲಿಸಿದ್ದರು. ನಂತರ, ಜೆಡಿಎಸ್ ಮುಖಂಡ ಜಗದೀಶ್ ಅವರು ದೂರು ನೀಡಿದ ಬಳಿಕ ಎಫ್‍ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: JDS ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್‌ಗೆ ಸೇರುತ್ತಾರೆ?; ಜಿಟಿಡಿ ಹೇಳಿದ್ದೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights