ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಜಿ ಶಾಸಕ ವೈಎಸ್‌ವಿ ದತ್ತ ಮೌನ ಪ್ರತಿಭಟನೆ!

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಡೂರು ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ ಮುಖಂಡ ವೈಎಸ್‌ವಿ ದತ್ತ ಅವರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿದ್ದಾರೆ.

ರಾಗಿಗೆ ಬೆಂಬಲ ಬೆಲೆ ನೀಡಬೇಕು, ಬಂಡಿಮೋಟು ಪ್ರದೇಶವನ್ನು ಮರಗಳ್ಳರಿಂದ ಸಂರಕ್ಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಬಗರ್ ಹುಕುಂನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದನ್ನು ತಡೆದು ಜನರಿಗೆ ಸೌಕರ್ಯ ಒದಗಿಸಬೇಕು ಎಂದು ವೈಎಸ್‌ವಿ ದತ್ತ ಒತ್ತಾಯಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರ ಒತ್ತಾಯಗಳನ್ನು ಆಲಿಸಿದ್ದಾರೆ. ತಮ್ಮ ಬೇಡಿಕೆಗಳ ಬಗ್ಗೆ ತಿಳಿಸಿದ ವೈಎಸ್‌ವಿ ದತ್ತ ಅವರು ಹಲವು ವಿಚಾರಗಳಲ್ಲಿ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ನೌಕಾಪಡೆಯ ಜಾಬಿರ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights