ಕೊರೊನಾದಿಂದ ಮೃತಪಟ್ಟ ಪೊಲೀಸ್‌ ಸಿಬ್ಬಂದಿಗಳ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ; ಮಹಾರಾಷ್ಟ್ರ ಸರ್ಕಾರ ಘೋಷಣೆ

ಕೊರೊನಾ ವಿರುದ್ದದ ಹೋರಾಟದಲ್ಲಿ ಕರ್ತವ್ಯದಲ್ಲಿದ್ದು ಮೃತಪಟ್ಟ ಪೊಲೀಸ್‌ ಸಿಬ್ಬಂಧಿಯ ಕುಟುಂಬಗಳಿಗೆ ತಲಾ 50 ಲಕ್ಷ ರೂ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಘೋಷಿಸಿದ್ದಾರೆ.

ಕರ್ತವ್ಯದಲ್ಲಿ ನಿರತರಾಗಿದ್ದ ಹಲವಾರು ಪೊಲೀಸ್‌ ಅಧಿಕಾರಿಗಳು ವೈರಸ್‌ಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಅವರ ಕುಟುಂಬಗಳಿಗೆ ನೆರವು ನೀಡುವ ಅಗತ್ಯವಿದೆ. ಅದಕ್ಕಾಗಿ ಪ್ರಾಣ ಕಳೆದುಕೊಂಡ ಪೊಲೀಸ್‌ ಸಿಬ್ಬಂದಿಯ ಪ್ರತಿ ಕುಟುಂಬಗಳಿಗೂ 50 ಲಕ್ಷ ರೂ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಇಲಾಖೆಗೆ 700 ಕೋಟಿ ರೂ.ಗಳ ಅನುದಾನದೊಂದಿಗೆ ಇಲಾಖೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ವಸತಿ ಸಮಸ್ಯೆಯನ್ನೂ ಬಗೆಹರಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಮರಾಠಾ ಕೋಟಾ: ಕೇಂದ್ರದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಪಾಟೀಲ್ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪುಣೆಯಲ್ಲಿ ಇಂದು ಎರಡು ಪೊಲೀಸ್ ಕಲ್ಯಾಣ ಪೆಟ್ರೋಲ್ ಪಂಪ್‌ಗಳನ್ನು ಉದ್ಘಾಟಿಸಿದ್ದಾರೆ. ಈ ಘಟಕಗಳನ್ನು ಮಹಿಳಾ ಸಿಬ್ಬಂದಿ ನಿರ್ವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪಾಟೀಲ್ ಅವರು, ಸಮಾಜವನ್ನು ಉಳಿಸುವುದಕ್ಕಾಗಿ ಸವಾಲಿನ ಪರಿಸ್ಥಿತಿಗಳಲ್ಲಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಮತ್ತು COVID-19 ಸಾಂಕ್ರಾಮಿಕ ರೋಗದಿಂದಾಗಿ ಇಲಾಖೆಯ ಮೇಲೆ ಒತ್ತಡವು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ BJPಯಲ್ಲೂ ಬಂಡಾಯ ಸ್ಪೋಟ; ಅಲುಗಾಡುತ್ತಿದೆ ತಿರತ್ ಸಿಂಗ್ ಸಿಎಂ ಖುರ್ಚಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights