ದೇಶದಲ್ಲಿ 44,111 ಹೊಸ ಕೊರೊನಾ ಕೇಸ್ : ಒಂದೇ ದಿನ 738 ಜನ ಬಲಿ..!
ದೇಶದಲ್ಲಿ ಒಂದೇ ದಿನ 44,111 ಹೊಸ ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 738 ಜನ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 44,111 ಹೊಸ ಕೊರೊನಾವೈರಸ್ ಪ್ರಕರಣಗಳು ದಾಖಲಾಗಿದ್ದು ಈವರೆಗೆ ದೇಶದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 3,05,02,362 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 4,01,050 ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4,95,533 ಕ್ಕೆ ಇಳಿದಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 57,477 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,96,05,779ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 18,76,036 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 41,64,16,463 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಲಸಿಕೆ ರೋಗಲಕ್ಷಣದ ಕೋವಿಡ್ -19 ರ ವಿರುದ್ಧ ಶೇಕಡಾ 77.8 ರಷ್ಟು ಪರಿಣಾಮಕಾರಿ ಎಂದು ಕಂಡುಬಂದಿದೆ. ಇನ್ನೂ ಗರ್ಭಿಣಿಯರು ಗರ್ಭಾವಸ್ಥೆಯ ಯಾವುದೇ ಸಮಯದಲ್ಲಿ ಕೋವಿಡ್ -19 ಲಸಿಕೆ ಪಡೆಯಲು ಅರ್ಹರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಗರ್ಭಿಣಿ ಮಹಿಳೆಯರಿಗೆ ತಿಳುವಳಿಕೆಯುಳ್ಳ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು, ಗರ್ಭಾವಸ್ಥೆಯಲ್ಲಿ ಕೋವಿಡ್ -19 ಸೋಂಕಿನಿಂದ ಉಂಟಾಗುವ ಅಪಾಯಗಳು, ವ್ಯಾಕ್ಸಿನೇಷನ್‌ನ ಪ್ರಯೋಜನಗಳು ಮತ್ತು ವ್ಯಾಕ್ಸಿನೇಷನ್‌ನ ಅಡ್ಡಪರಿಣಾಮಗಳನ್ನು ವಿವರಿಸುವ ಮಾರ್ಗಸೂಚಿಗಳನ್ನು ಸಚಿವಾಲಯ ಬಿಡುಗಡೆ ಮಾಡಿದೆ.

