ಐದೇ ತಿಂಗಳಿಗೆ ಸಿಎಂ ಸ್ಥಾನ ಕಳೆದುಕೊಂಡ ತಿರತ್ ಸಿಂಗ್ ರಾವತ್‌; 6 ತಿಂಗಳಲ್ಲಿ BJPಯ 3 ಮುಖ್ಯಮಂತ್ರಿಗಳು!

ಮಾರ್ಚ್‌ ತಿಂಗಳಲ್ಲಿ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ತಿರತ್‌ ಸಿಂಗ್‌ ರಾವತ್‌ ಐದೇ ತಿಂಗಳಲ್ಲಿ ತಮ್ಮ ಹುದ್ದೆ ಕಳೆದುಕೊಂಡಿದ್ದಾರೆ. ಇಂದು (ಶನಿವಾರ) ಸಿಎಂ ಹುದ್ದೆಗೆ ತಿರತ್‌ ಸಿಂಗ್‌ ರಾಜೀನಾಮೆ ನೀಡಿದ್ದು, ಖತಿಮಾ ಕ್ಷೇತ್ರದ ಶಾಸಕ ಪುಷ್ಕರ್ ಸಿಂಗ್ ಧಾಮಿ ಅವರನ್ನು ನೂತನ ಸಿಎಂ ಆಗಿ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ.

ಪಕ್ಷ ಸಾಮಾನ್ಯ ಕಾರ್ಯಕರ್ತನನ್ನು ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದೆ. ರಾಜ್ಯದ ಜನರ ಹಿತಕ್ಕೆ ಕೆಲಸಮಾಡುವುದಾಗಿ ಪುಷ್ಕರ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ನಿವೃತ್ತ ಯೋಧನ ಮಗನಾಗಿ ನನಗೆ ರಾಜ್ಯದ ಜನರ ಸೇವೆ ಮಾಡಲು ಅವಕಾಶ ಲಭಿಸಿರುವುದು ನನ್ನ ಅದೃಷ್ಟ. ನಮ್ಮ ಮುಂದಿರುವ ಸವಾಲುಗಳನ್ನು ಸ್ವೀಕರಿಸಿ ಎಲ್ಲರ ಸಹಾಯ ಪಡೆದು ರಾಜ್ಯದ ಅಭಿವೃದ್ಧಿ ಕೆಲಸ ಮಾಡುವುದಾಗಿ ಪುಷ್ಕರ್ ಸಿಂಗ್ ರಾವತ್‌ ಹೇಳಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ತೀರಥ್ ಸಿಂಗ್ ರಾವತ್ ಶುಕ್ರವಾರ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಶನಿವಾರ ಕೇಂದ್ರ ಮಂತ್ರಿ ನರೇಂದ್ರ  ಸಿಂಗ್‌ ತೋಮರ್ ನೇತೃತ್ವದಲ್ಲಿ ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

2022ರಲ್ಲಿ ಉತ್ತರಾಖಂಡ್‌ ವಿಧಾನ ಸಭೆಗೆ ಚುನಾವಣೆ ನಡೆಯಲಿದ್ದು ನೂತನ ಮುಖ್ಯಮಂತ್ರಿ ಪುಷ್ಕರ್ ಸಿಂಗ್‌ ರಾವತ್ ಅಧಿಕಾರಾವಧಿ 1 ವರ್ಷಕ್ಕಿಂತಲೂ ಕಡಿಮೆ ಇದೆ.

ಉತ್ತರಾಖಂಡ್‌ನಲ್ಲಿ ಕಳೆದ 5 ವರ್ಷದಲ್ಲಿ 4 ಮುಖ್ಯಮಂತ್ರಿಗಳು ಅಧಿಕಾರ ವಹಿಸಿಕೊಂಡಿದ್ದಾರೆ. ಇವರಲ್ಲಿ ಇಬ್ಬರು ಮುಖ್ಯಮಂತ್ರಿಗಳು 1 ವರ್ಷಕ್ಕಿಂತಲೂ ಕಡಿಮೆ ಅವಧಿಯಲ್ಲಿ ಅಧಿಕಾರದಿಂದ ಕೆಳಗಿಳಿದಿದ್ದಾರೆ.

ಇದನ್ನೂ ಓದಿ: ಸಿಎಂ ಖುರ್ಚಿಗೆ ಸಂಚಕಾರ?; ನಿಜಕ್ಕೂ ಬಿಎಸ್‌ವೈಗೆ ಕೊರೊನಾ ಬಂದಿತ್ತಾ? ಇವೆ ಹಲವು ಅನುಮಾನಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights