ಮಹಿಳಾ ಕ್ರಿಕೆಟ್ ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮಿಥಾಲಿ ರಾಜ್..!
ಭಾರತದ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮಹಿಳಾ ಕ್ರಿಕೆಟ್‌ನಲ್ಲಿ ಹೆಚ್ಚಿನ ರನ್ ಗಳಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಜೊತೆಗೆ ಹೆಚ್ಚಿನ ರನ್ ಗಳಿಸಿದ ಷಾರ್ಲೆಟ್ ಎಡ್ವರ್ಡ್ಸ್ ಅವರನ್ನು ಹಿಂದಿಕ್ಕಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ಈ ಸಾಧನೆ ಮಾಡಿದ್ದಾರೆ. ಭಾರತದ ನಾಯಕಿ ಇಂಗ್ಲೆಂಡ್‌ನ ಮಾಜಿ ಆಟಗಾರ್ತಿ ಚಾರ್ಲೋಟ್ ಎಡ್ವರ್ಡ್ಸ್ ದಾಖಲೆಯನ್ನು ಹಿಂದಿಕ್ಕಿ ಮೈಲಿಗಲ್ಲು ಸೃಷ್ಟಿಸಿದ್ದಾರೆ.
ಎಡ್ವರ್ಡ್ಸ್ ಎಲ್ಲಾ ಆವೃತ್ತಿಗಳು ಸೇರಿ ಒಟ್ಟಾರೆ 10,273 ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ. ಚಾರ್ಲೊಟ್‌ರನ್ನು ಹಿಂದಿಕ್ಕಲು ಮಿಥಾಲಿಗೆ ಕೇವಲ 12 ರನ್‌ಗಳ ಅಗತ್ಯವಿತ್ತು.ಇಂಗ್ಲೆಂಡ್ ವಿರುದ್ಧ ಮೂರನೇ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿರುವ ಮೂಲಕ ಈ ದಾಖಲೆ ಬರೆದಿದ್ದಾರೆ.
ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೆಚ್ಚಿನ ರನ್ ಗಳಿಸಿದ ಮಹಿಳೆಯರು…
ಮಿಥಾಲಿ ರಾಜ್ – 317 ಪಂದ್ಯಗಳಲ್ಲಿ 10,277
ಷಾರ್ಲೆಟ್ ಎಡ್ವರ್ಡ್ಸ್ – 309 ಪಂದ್ಯಗಳಲ್ಲಿ 10,273
ಸುಝಿಇ ಬೇಟ್ಸ್ – 247 ಪಂದ್ಯಗಳಲ್ಲಿ 7849 ರನ್
ಸ್ಟೆಫಾನಿ ಟೇಲರ್ – 256 ಪಂದ್ಯಗಳಲ್ಲಿ 7834
ಮೆಗ್ ಲ್ಯಾನಿಂಗ್ – 199 ಪಂದ್ಯಗಳಲ್ಲಿ 7024
https://twitter.com/BCCIWomen/status/1411366212974546949?ref_src=twsrc%5Etfw%7Ctwcamp%5Etweetembed%7Ctwterm%5E1411366212974546949%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Fsports%2Fcricket%2Fstory%2Fmithali-raj-most-runs-international-womens-cricket-charlotte-edwards-england-women-vs-india-1823536-2021-07-03
ಕಳೆದ ಮಾರ್ಚ್‌ನಲ್ಲಿ ಏಕದಿನ ಪಂದ್ಯಗಳಲ್ಲಿ 7,000 ರನ್ ಗಳಿಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಿಥಾಲಿ ಪಾತ್ರರಾಗಿದ್ದರು.
38ರ ಹರೆಯದ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ್ದಾರೆ. ಅಲ್ಲದೆ ಮೂರು ಫಾರ್ಮೆಟ್ನಲ್ಲಿ 10,000 ರನ್ ಗಳಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಮಿಥಾಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್ ಗಳಿಸಿದ ಎರಡನೇ ಆಟಗಾರ್ತಿ. ಇದಕ್ಕೂ ಮುನ್ನು ಚಾರ್ಲೋಟ್ ಎಡ್ವರ್ಡ್ಸ್ 10 ಸಾವಿರ ರನ್ ಗಡಿ ದಾಟಿದ್ದರು.