ಕಾಂಗ್ರೆಸ್‌ನಲ್ಲಿ ಜಾತಿಗೊಬ್ಬರಂತೆ ಮುಖ್ಯಮಂತ್ರಿ ಗಾದಿಯ ರೇಸ್‌ನಲ್ಲಿದ್ದಾರೆ: ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬಂಡಾಯ ಕೆಂಡಮುಚ್ಚಿದ ಬೂದಿಯಂತೆ ಬುಸುಗುಡಿತ್ತಿದೆ. ಈ ಮಧ್ಯೆ, ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿರುವ ಸಚಿವ ಈಶ್ವರಪ್ಪ, ರಾಜ್ಯ ಕಾಂಗ್ರೆಸ್‌ನಲ್ಲಿ ಕೆಲ ಕೌರವರು ಅಧಿಕಾರ ಹಿಡಿಯಬೇಕು ಎಂದು ಯತ್ನಸುತ್ತಿದ್ದಾರೆ. ಅವರಲ್ಲಿ, ಜಾತಿಗೆ ಒಬ್ಬೊಬ್ಬರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಕಾರ್ಯಕರ್ತರ ಮೂಲಕ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಾರೆ. ದಲಿತ ಮುಖ್ಯಮಂತ್ರಿ ಜಪ ಮಾಡುತ್ತಿರುವ ಪರಮೇಶ್ವರ್ ನಾನೇ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಇತ್ತ ಅಲ್ಪಸಂಖ್ಯಾತರಿಂದ ತನ್ವೀರ್ ಸೇಠ್ ನಾನೂ ಇದ್ದೇನೆ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಹಾಗೂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ನೀಡುವುದಾಗಿ ಕೇವಲ ಬಾಯಿ ಮಾತಲ್ಲಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ತನ್ವಿರ್ ಸೇಠ್ ಸೇರಿದಂತೆ ಹಲವರು ಜಾತಿ ಹೆಸರಲ್ಲಿ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆ. ಇವರಿಗೆ ಮಾನ-ಮರ್ಯಾದೆ ಇದ್ದಿದ್ದರೆ, ಜನರು ತಿರಸ್ಕರಿಸಿದ ಬಳಿಕ ಸುಮ್ಮನಿರಬೇಕಿತ್ತು ಎಂದು ಟೀಕಸಿದ್ದಾರೆ.

‘ಧರ್ಮವನ್ನು ಹಾಳು ಮಾಡುವ ಕಾಂಗ್ರೆಸ್ ಪಕ್ಷವನ್ನು ಜನರೇ ತಿರಸ್ಕಾರ ಮಾಡಿ ಹೊರಗಟ್ಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವಾಗಲೇ, ತಾವು ಮುಖ್ಯಮಂತ್ರಿ ಎಂದು ಇವರೇ ಬಡಿದಾಡಿಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: ‘ಅಂಬಾರಿ ಹೋರಲು ಯಾವ ಆನೆ ಸೂಕ್ತ ಅಂತ ಗೊತ್ತಿದೆ’ ಸಿಎಂ ಪುತ್ರನಿಗೆ ಟಾಂಗ್ ಕೊಟ್ಟ ಸಿಪಿ ಯೋಗೇಶ್ವರ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights