ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ!

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಭಾನುವಾರ ಸಂಜೆ ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದಾರೆ.

ಅವರ ರಕ್ತ ಪರೀಕ್ಷೆಗಳಲ್ಲಿ ಅವರ ಯೂರಿಯಾ ಮತ್ತು ಕ್ರಿಯೇಟಿನೈನ್ ಮಟ್ಟವೂ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಅವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ವಕ್ತಾರ ಡಾ.ಶ್ರೀಕೇಶ್ ಸಿಂಗ್ ಹೇಳಿದ್ದಾರೆ. ಆದರೂ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಕಲ್ಯಾಣ್ ಸಿಂಗ್ ಅವರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಬೆಳಿಗ್ಗೆ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದರು. ಯೋಗಿ ಆದಿತ್ಯನಾಥ್ ಅವರ ಯೋಗಕ್ಷೇಮವನ್ನು ವಿಚಾರಿಸಿ ವೈದ್ಯರೊಂದಿಗೆ ಮಾತನಾಡಿದರು.

ಯೋಗಿ ಆದಿತ್ಯನಾಥ್ ಅವರಿಗೆ ಚಿಂತಿಸಬೇಕಾಗಿಲ್ಲ ಮತ್ತು ಕಲ್ಯಾಣ್ ಸಿಂಗ್ ಅವರ ಆರೋಗ್ಯ ಬುಲೆಟಿನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ವೈದ್ಯರು ಭರವಸೆ ನೀಡಿದರು.

ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ರಾಜಸ್ಥಾನದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights