ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.  ಈ ಹಿಂದೆ ವಜುಭಾಯ್ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಸೇವಾವಧಿ ಮುಗಿದ ಹಿನ್ನೆಲೆ ಗೆಹ್ಲೋಟ್​ ಅವರನ್ನು ನೂತನ ರಾಜ್ಯಪಾಲರಾಗಿ ಗೆಹ್ಲೋಟ್​ ಅವರನ್ನು ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.  ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳುವ ಮೂಲಕ ವಜುಬಾಯಿ ವಾಲಾ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ, ಪಕ್ಷವಾರು ಪ್ರಾತಿನಿಧ್ಯದ ನೆಲೆಯಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಅದರ ಭಾಗಿವಾಗಿಯೇ ರಾಜ್ಯಪಾಲರ ಹುದ್ದೆಗೆ ನೇಮಕಗಳು ನಡೆದಿವೆ ಎನ್ನಲಾಗುತ್ತಿದೆ.

ಬಿಜೆಪಿ ಸಂಘಟನೆಯಲ್ಲಿ ಮತ್ತು ಸರ್ಕಾರದಲ್ಲಿ ಹಲವು ಜವಾಬ್ದಾರಿ ಮತ್ತು ಹುದ್ದೆಗಳನ್ನು ನಿರ್ವಹಿಸಿರುವ ಗೆಹ್ಲೋಟ್, 2013 ರಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. ರಾಜ್ಯದ ಉಸ್ತುವಾರಿಯಾಗಿ ಕೆಲಸ ಮಾಡಿದ್ದ ರಾಜ್ಯಕ್ಕೆ ಇದೀಗ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಹೊಸ ರಾಜ್ಯಪಾಲರ ಪಟ್ಟಿ ಹೀಗಿದೆ:
ಪಿ ಎಸ್ ಶ್ರೀಧರನ್- ಗೋವಾ
ಸತ್ಯದೇವ್ ನಾರಾಯಣ್ ಆರ್ಯ- ತ್ರಿಪುರ
ರಮೇಶ್ ಭೈಂಸ್ – ಝಾರ್ಖಂಡ್
ಬಂಡಾರು ದತ್ತಾತ್ರೇಯ – ಹರ್ಯಾಣಾ
ಹರಿಬಾಬು ಕಂಭಂಪತಿ- ಮಿಝೋರಾಂ
ತಾವರ್ ಚಂದ್ ಗೆಹ್ಲೋಟ್- ಕರ್ನಾಟಕ

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights