ಲೈಂಗಿಕ ಅಲ್ಪಸಂಖ್ಯಾತರಿಗೆ ಗುಡ್‌ ನ್ಯೂಸ್‌; ಎಲ್ಲಾ ಹುದ್ದೆಗಳಲ್ಲಿಯೂ 1% ಮೀಸಲಾತಿ ಜಾರಿ!

ರಾಜ್ಯ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೆ ತಂದಿದ್ದು, ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡುವ ಎಲ್ಲಾ ರೀತಿಯ (ಗ್ರೂಪ್‌ ಎ ನಿಂದ ಗ್ರೂಪ್‌ ಡಿ) ಹುದ್ದೆಗಳಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರಿಗೆ 1% ಮೀಸಲಾತಿ ನೀಡಬೇಕೆಂದು ಮಂಗಳವಾರ ಆದೇಶ ಹೊರಡಿಸಿದೆ.

ಜನರಲ್ ಮೆರಿಟ್‌, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿಯೂ ಲೈಗಿಂಕ ಅಲ್ಪಸಂಖ್ಯಾತರಿಗೆ 1% ಮೀಸಲಾತಿ ಲಭ್ಯವಿರುತ್ತದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9 ಅನ್ನು ತಿದ್ದುಪಡಿ ಮಾಡಲಾಗಿದೆ.

ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಂಗಮ ಎಂಬ ಸಂಸ್ಥೆಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಈ ಅಧಿಸೂಚನೆಯ ಕರಡನ್ನು ಕೋರ್ಟ್‌ ಸಲ್ಲಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ನ್ಯಾಯಾಲಯವು ಕಳೆದ ವರ್ಷ ಸರ್ಕಾರಕ್ಕೆ ಸೂಚಿಸಿತ್ತು.

ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ರಾಜ್ಯದಿಂದ ಇಬ್ಬರಿಗೆ ಮಂತ್ರಿಗಿರಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights