ಗ್ಯಾಂಗ್-ರೇಪ್ ಪ್ರಕರಣ; 12 ಮಂದಿ ಆರೋಪಿಗಳ ಬಂಧನ; ಪೊಲೀಸರಿಗೆ 1 ಲಕ್ಷ ಬಹುಮಾನ!
ಬಾಂಗ್ಲಾದೇಶದ ಯುವತಿ ಮೇಲೆ ನಡೆದ ಕ್ರೂರ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಮಹಿಳೆಯರು ಎಂದು ಪೊಲೀಸರು ತಿಳಿಸಿದ್ದಾರೆ.
ಐದು ವಾರಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಚಾರ್ಜ್ಶೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯ್ತುಕ ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.
ಪ್ರಕರಣದ ತಿನಿಖೆ ನಡೆಸಿದ ತನಿಖಾ ತಂಡವು ತೀವ್ರಗತಿಯಲ್ಲಿ ತನಿಖೆಯಲ್ಲಿ ಪೂರ್ಣಗೊಳಿಸಿದ್ದಕ್ಕಾಗಿ ತಂಡಕ್ಕೆ 1 ಲಕ್ಷ ರೂ ಬಹುಮಾನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಯುವತಿ ಮೇಲೆ ಅತ್ಯಾಚಾರ ಮತ್ತು ಹಿಂಸೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ವರ್ಷದ ಮೇ ತಿಂಗಳಿನಲ್ಲಿ ನಡೆದ ಘಟನೆಯಲ್ಲಿ ಆರೋಪಿಗಳು ಯುವತಿಯ ಖಾಸಗಿ ಭಾಗಕ್ಕೆ ಬಾಟಲಿಗಳಿಂದ ಹಲ್ಲೆ ಮಾಡಲಾಗಿತ್ತು ಮತ್ತು ಸಾಮೂಹಿಕಅತ್ಯಾಚಾರ ಎಸಗಲಾಗಿತ್ತು.
Read Also: ರಷ್ಯಾದಲ್ಲಿ ಕಾಣೆಯಾದ 22 ಪ್ರಯಾಣಿಕರು, ಆರು ಸಿಬ್ಬಂದಿ ಇದ್ದ ವಿಮಾನ!
ಅತ್ಯಾಚಾರಕ್ಕೆ ತುತ್ತಾದ ಸಂತ್ರಸ್ತೆಯನ್ನು ಮೂರು ವರ್ಷಗಳ ಹಿಂದೆ ಅಸ್ಸಾಂ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಸಕ್ರಿಯವಾಗಿರುವ ಮಾನವ ಕಳ್ಳಸಾಗಣೆದಾರರ ಜಾಲವು ಬಾಂಗ್ಲಾದೇಶದಿಂದ ಕಳ್ಳಸಾಗಣೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯನ್ನು ಅಪಹರಿಸಿ ತಂದ ಗ್ಯಾಂಗ್ ಆಕೆಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಿತ್ತು. ಆದರೆ, ಹಣಕಾಸಿನ ವಿಚಾರದಲ್ಲಿ ವಿವಾದವಾದ ಬಳಿಕ ಆರೋಪಿಗಳು ಆಕೆಯನ್ನು ಹಿಂಸಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
An update on the Bangladeshi woman abuse case:
Twelve accused are arrested, out of which 11 accused persons & the victim are Bangladeshi nationals. The investigation is complete and a detailed & systemic 1019 page charge sheet has been submitted to the Hon'ble Court.. (1/3)
— Kamal Pant, IPS (@CPBlr) July 8, 2021
“ಇಲ್ಲಿಯವರೆಗೆ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಅವರೆಲ್ಲರೂ ಒಂದೇ ಗುಂಪಿನವರಾಗಿದ್ದಾರೆ ಮತ್ತು ಬಾಂಗ್ಲಾದೇಶದವರು ಎಂದು ಹೇಳಲಾಗಿದೆ. ಹಣಕಾಸಿನ ಭಿನ್ನಾಭಿಪ್ರಾಯಗಳಿಂದಾಗಿ, ಅರೋಪಿಗಳು ಸಂತ್ರಸ್ಥೆಯ ಮೇಲೆ ಕ್ರೂರವಾಗಿ ಹಲ್ಲೆನಡೆಸಿದ್ದಾರೆ. ಬೆಂಗಳೂರು ಪೊಲೀಸರು ಆರೋಪಿಗಳ ವಿರುದ್ದ ಅತ್ಯಾಚಾರ, ಹಲ್ಲೆ ಮತ್ತು ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಎರಡು ತಿಂಗಳುಗಳಲ್ಲಿ ತನಿಖೆ ಮತ್ತು ಬಂಧನದ ಸಮಯದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿ ಗಾಯಗೊಳಿಸಿದ್ದಾರೆ.
Read Also: ಬಾಡಿಗೆ ಸಿಗದೆ ಖಿನ್ನತೆ: ಬೆಂಗಳೂರು ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕ್ಯಾಬ್ ಚಾಲಕ ಸಾವು!

